ಮಂತ್ರಶಕ್ತಿ
ಸ್ನೇಹಿತನಿಂದ “ಮಂತ್ರಶಕ್ತಿ” ಎಂಬ ಕಾದಂಬರಿಯೊಂದನ್ನು ತಂದು ಸ್ವಲ್ಪ ಓದಿದೆ ಆದರೆ ಅದನ್ನು ಪುರ್ಣಗೊಳಿಸಲು ಸಮಯವೇ ಸಿಗುತ್ತಿರಲಿಲ್ಲ.ಒಂದು ದಿನ ವಾರಂತ್ಯದಲ್ಲಿ ಒಬ್ಬನೇ ರೂಂ ನಲ್ಲಿ ಇದ್ದೆ ತುಂಬಾ ಬೇಸರವಾಗಲಾರಂಬಿಸಿತು ಆಗ ಏನನ್ನಾದರೂ ಓದೋಣವೆಂದು ಅಪೂರ್ಣಗೊಳಿಸಿದ್ದ ಈ ಕಾದಂಬರಿ ತೆರೆದೆ ಓದುತ್ತಾ ಎಷ್ಟು ಕುತೂಹಲವಾಯಿತೆಂದರೆ ೨೫೦ ಪುಟಗಳ ಪುಸ್ತಕ ಮುಗಿದಿದ್ದೆ ತಿಳಿಯಲಿಲ್ಲ.
“ಶವವಾಗಿದ್ದ ಯುವತಿ ಜೀವಂತ ಎದ್ದು ನಿಂತಳು……”
“ಸದಾ ಮರವೇರಿ ಕುಳಿತರುತ್ತಿದ್ದ ಹುಡುಗ ಕೆಳಗಿಳಿದು ಬಂದು ಬಾಳುವೆ ಮಾಡತೊಡಗಿದ……”
“ಕಣ್ಣಿನ ದೃಷ್ಟಿಯಿಂದಲೇ ಮೋಹಿತಳಾದ ಹೆಂಗಸೋಬ್ಬಳು ಕಂಡುಕೇಳರಿಯದವನೋಬ್ಬನ ದುರಾಸೆಗೆ ಬಲಿಯಾದಳು….. ”
ಇವು ಈ ಗ್ರಂಥದಲ್ಲಿ ನಡೆಯುವ ಅಸಂಖ್ಯಾತ ಘಟನೆಗಳಲ್ಲಿ ಒಂದೆರಡಷ್ಟೆ.ನಮ್ಮ ಇಂದಿನ ಯಾಂತ್ರಿಕ ಜೀವನದಲ್ಲಿ,ನಾಗರಿಕತೆಯ ಹೆಸರಿನಲ್ಲಿ,ವಿಜ್ಞಾನದ ಬೆಳಕಿನಲ್ಲಿ ತರ್ಕಕ್ಕೆ ಸಿಕ್ಕದ ಇಂಥ ಘಟನೆಗಳು ಅತೀಂದ್ರಿಯ ಲೋಕವೊಂದನ್ನು ಧ್ವನಿಸುತ್ತವೆ.ಮನುಷ್ಯನ ಎಲ್ಲೆಯಿರದ ಮನಃಶಕ್ತಿಯನ್ನು ಮನವರಿಕೆ ಮಾಡಿಕೊಡುವ ಈ ಕೃತಿ ಒಂದು ಅರ್ಥದಲ್ಲಿ ಕಾದಂಬರಿ,ನಿಜ.ಆದರೆ ವ್ಯಾಪಕ ಅರ್ಥದಲ್ಲಿ ಸಂಕಲ್ಪ ಶಕ್ತಿಯಿಂದ ಪ್ರೇರಿತವಾದ ಮಾನವಮನಸ್ಸಿನ ಸೂಕ್ಷ್ಮಗಳನ್ನು ಆಧಾರಗಳ ಮೂಲಕ ನಿರೂಪಿಸುವ ಅಪೂರ್ವ ಗ್ರಂಥ.ಕನ್ನಡದಲ್ಲಿ ಈ ಬಗೆಯ ಕಾದಂಬರಿಗಳನ್ನು ಮೊಟ್ಟಮೊದಲಿಗೆ ಬರೆದವರು ಇಂದಿರಾತನಯ ಎಂದು ಕರೆಯಲ್ಪಡುವ ಶ್ಯಾಮ್. ಅತ್ಯಂತ ಕ್ಲಿಷ್ಟವಾದ ಮಂತ್ರತಂತ್ರ ವಿದ್ಯೆಗಳನ್ನು ಸಮಾಜ ಜೀವನದ ಗಾಜಿನ ಮೂಲಕ ಹಾಯಿಸಿ,ಒಂದು ಗಾಢ ಅನುಭವ ಉಂಟಾಗುವಂತೆ ಮಾಡುವ ಅವರ ಬರವಣಿಗೆ ನಮ್ಮ ಸಾಹಿತ್ಯ ಸಂದರ್ಭದಲ್ಲಿ ತೀರ ಅಪರೂಪವಾದದ್ದು.ನೇರವಾಗಿ ಕತೆ ಹೇಳುವ ಜಾಣ್ಮೆ, ಉದ್ದೇಶಿಸಿರುವುದಕ್ಕಿಂತ ಹೆಚ್ಚು ಧ್ವನಿಸುವ ಪಾರದರ್ಶಕ ಭಾಷೆ,ಪಾತ್ರಗಳ ಅಂತರಂಗವನ್ನು ನಿರಾಯಾಸವಾಗಿ ತೆರೆದಿಡಬಲ್ಲ ಕಲಾತ್ಮಕ ಅಭಿವ್ಯಕ್ತಿ -ಇವುಗಳಿಂದಾಗಿ ಈ ಕೃತಿ ಮತ್ತೆ ಮತ್ತೆ ಓದಬೇಕನ್ನಿಸುವ ಅನನ್ಯ ಕೃತಿಯೆನಿಸಿದೆ.ಇಲ್ಲಿ ನಿರೂಪಿತವಾಗಿರುವ ಘಟನೆಗಳು ಮೊದಲ ನೋಟಕ್ಕೆ ಹೆದರಿಕೆ ಹುಟ್ಟಿಸುವಂತಿದ್ದರೂ,ಪುಸ್ತಕ ಓದಿ ಮುಗಿಸಿದಾಗ ಮನಶ್ಯಕ್ತಿಯ ಸಾಧ್ಯತೆಗಳನ್ನು ಮನದಟ್ಟು ಮಾಡಿಕೊಡುವ ಅನುಭವ ಘಟಕಗಳಾಗಿಯೂ ಅವು ಕೆಲಸ ಮಾಡುತ್ತವೆ.ಲೇಖಕರ ಅತೀಂದ್ರಿಯ ಅನುಭವಗಳ ಅಭಿವ್ಯಕ್ತಿಗೆ ಕಾದಂಬರಿ ಪ್ರಕಾರ ಒಂದು ವಾಹಕವಷ್ಟೆ.ಅತೀಂದ್ರಿಯ ಲೋಕವನ್ನು ಕಣ್ಣೆದುರು ತರುವ ಇಂದಿರಾತನಯರವರ “ಮಂತ್ರಶಕ್ತಿ” ಒಂದು ಉತ್ತಮ ಕಾದಂಬರಿಯಾಗಿದೆ.
READ MORE
ದೊಡ್ಡ ಆಲದ ಮರ ಭಾರತದ ೪ ನೇ ಅತಿ ದೊಡ್ಡ ಆಲದ ಮರ.
ದೊಡ್ಡ ಆಲದ ಮರವು ಬೆಂಗಳೂರು ನಗರದಿಂದ ೨೮ ಕಿಮೀ ದೂರದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಕೇತೋಹಳ್ಳಿ ಗ್ರಾಮದಲ್ಲಿದ್ದು,ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ೮ ಕಿಮೀ ದೂರದಲ್ಲಿದೆ.ದೊಡ್ಡ ಆಲದ ಮರವು ೪೦೦ ವರ್ಷ ಹಳೆಯದಾಗಿದ್ದು ಭಾರತದಲ್ಲಿನ ಪುರಾತನ ಆಲದ ಮರಗಳಲ್ಲಿ ಪ್ರಸ್ತುತ ೪ನೇ ದೊಡ್ಡ ಆಲದ ಮರವಾಗಿದೆ.ಮೊದಲ,ಎರಡನೆಯ ಮತ್ತು ಮೂರನೆಯ ಸ್ಥಾನದಲ್ಲಿನ ಆಲದ ಮರಗಳು ಆಂಧ್ರಪ್ರದೇಶ, ಕಲ್ಕತ್ತ, ಮತ್ತು ಚೆನ್ನೈನ ಅದಿಪುರ್ ಪ್ರದೇಶದಲ್ಲಿದೆ.ಈ ಮರವು ೯೫ಅಡಿಗಳಷ್ಟು ಎತ್ತರವಾಗಿದ್ದು ಮೇಲ್ಭಾಗವು ೧೨೦ ಮೀ ವ್ಯಾಪ್ತಿಯ ಪ್ರದೇಶದಲ್ಲಿ ಹರಡಿಕೊಂಡಿದೆ ಹಾಗೂ ಒಟ್ಟಾರೆಯಾಗಿ ಆಲದ ಮರವು ೩ ಎಕರೆ ಪ್ರದೇಶದ ವ್ಯಾಪ್ತಿಯಲ್ಲಿ ಹರಡಿಕೊಂಡಿದೆ.ಮರದ ಪ್ರದಾನ ಕಾಂಡವು ನಶಿಸಿದೆ ಆದರೆ ಮರವು ಅನೇಕ ಕೊಂಬೆಗಳ ಆಧಾರ ಮತ್ತು ಪೋಷಣೆಯಲ್ಲಿ ಬೆಳೆಯುತ್ತಿದೆ.ಇದರ ರೆಂಬೆಗಳು ಈಗಲೂ ಪ್ರಬಲವಾಗಿ ಮತ್ತು ಹೆಚ್ಚು ವೇಗವಾಗಿ ಬೆಳೆಯುತ್ತಿವೆ.
ಈ ಮರವು FICUS BENGHALENSIS ಪ್ರಭೇದಕ್ಕೆ ಸೇರಿದೆ.ವಾರಂತ್ಯದಲ್ಲಿ ಗೆಳೆಯರ ಜೊತೆ ಹೋಗಿದ್ದೆ ಸುಂದರ ಅನುಭವ ಇಲ್ಲಿ ಮುನೇಶ್ವರ ದೇವಾಲಯವಿದೆ ಹಾಗೂ ತುಂಬಾ ವರ್ಷಗಳ ಹಿಂದೆ ಇಲ್ಲಿ ಯಾರೋ ಮುನೇಶ್ವರ ವಿಗ್ರಹವನ್ನು ರಾತ್ರೋರಾತ್ರಿಯಲ್ಲಿ ತಂದಿಟ್ಟಿದ್ದಾರೆ ಅದು ಈಗಲೂ ದೇವಾಲಯದ ಹೊರಗಿದೆ.ರಾತ್ರಿ ೮ಗಂಟೆಯ ಮೇಲೆ ಇಲ್ಲಿ ಯಾರು ಓಡಾಡುವುದಿಿಲ್ಲ.ಕಾರಣ ಇಲ್ಲಿ ಮುನಿಗಳು,ಋಷಿಗಳು,ದೆವ್ವವು ಓಡಾಡುತ್ತವೆಂದು ಹೇಳಲಾಗುತ್ತದೆ.ಇಲ್ಲಿ ಹೋದರೆ ನಿಮ್ಮ ವಸ್ತುಗಳ ಮೇಲೆ ಗಮನ ಇರಬೇಕು ಇಲ್ಲಿ ಕೋತಿಗಳ ಕಾಟವು ಇದೆ.
READ MOREಸುಂದರ ಜೀವನಕ್ಕೆ ಕೆಲವು ಸೂತ್ರಗಳು
- ದಿನಾ 10-30 ನಿಮಿಷಗಳ ಕಾಲ ನಗುಮೊಗದಿಂದ ವಾಕ್ ಮಾಡಿ. 10 ನಿಮಿಷಗಳ ಮೌನ ಆಚರಿಸಿ, 7 ಘಂಟೆಗಳ ಕಾಲ ನಿದ್ದೆ ಮಾಡಿ.
- ದಿನಾಲೂ ಪ್ರಾರ್ಥನೆ, ಧ್ಯಾನ ಮನಸ್ಸನ್ನು ಹತೋಟಿಯಲ್ಲಿಡುತ್ತದೆ. ಜೀವನದ ಜಂಜಡವನ್ನು ಎದುರಿಸಲು ಇಂಧನದಂತೆ ಶಕ್ತಿ ನೀಡುತ್ತದೆ.
- ಶಕ್ತಿ, ಉತ್ಸಾಹ, ಸಂವೇದನಾಶೀಲತೆ ಇರಲಿ.
- ಧಾರಾಳವಾಗಿ ನೀರು ಕುಡಿಯಿರಿ. ಇಷ್ಟವಾದ ಆಟವಾಡಿ.
- ತಿಂಡಿ ರಾಜನಂತೆ ತಿನ್ನಿ. ಮಧ್ಯಾಹ್ನದ ಊಟ ರಾಣಿಯಂತೆ ತಿನ್ನಿ. ರಾತ್ರಿ ಊಟ ಭಿಕ್ಷುಕನಂತೆ ಇರಲಿ.
- ಕಾರ್ಖಾನೆಗಳಲ್ಲಿ ತಯಾರಾಗುವ ಆಹಾರಕ್ಕಿಂತ ಗಿಡಗಳಲ್ಲಿ ಬಿಡುವ ಆಹಾರವನ್ನು ಹೆಚ್ಚು ಹೆಚ್ಚು ತಿನ್ನಿ.
- ಜಾಸ್ತಿ ಮುಗುಳುನಗಿ. ಹೆಚ್ಚೆಚ್ಚು ನಕ್ಕುಬಿಡಿ. ದಿನಾಲೂ ಕನಿಷ್ಟ 3 ಜನರಿಗಾದರೂ ಮುಗುಳುನಗೆ ಬೀರಿ.
- ಗಾಸಿಪ್ ಗಳಲ್ಲಿ ಕಾಲಕಳೆದು ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳಬೇಡಿ. ಆ ಶಕ್ತಿಯನ್ನು ಧನಾತ್ಮಕ ಚಿಂತನೆಗಳಿಗೆ ಬಳಸಿ.
- ಯಾರನ್ನೂ ದ್ವೇಷಿಸುವದರಲ್ಲಿ ಕಾಲ ಕೊಲ್ಲಬೇಡಿ. ಜೀವನ ಚಿಕ್ಕದು. ನಿಮ್ಮನ್ನು ಯಾರಿಗೂ ಹೋಲಿಸಿಕೊಳ್ಳಬೇಡಿ. ಯಾಕೆಂದರೆ ಅವರ ಪಯಣ ಎಲ್ಲೆಂದು ನಿಮಗೆ ತಿಳಿದಿಲ್ಲ.
- ದಿನಾಲೂ ಸ್ವಲ್ಪ ಸಮಯವಾದರೂ 70 ವರ್ಷಕ್ಕಿಂತ ಜಾಸ್ತಿ, 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಡನೆ ಕಾಲ ಕಳೆಯಿರಿ.
- ಎಲ್ಲಾ ವಾದಗಳನ್ನೂ ಗೆಲ್ಲಬೇಕಿಂದಿಲ್ಲ. ಸೋತು ಗೆದ್ದುಬಿಡಿ.
- ನಿಮ್ಮ ಸಂಗಾತಿಗೆ ಅವರ ಹಿಂದಿನ ತಪ್ಪುಗಳನ್ನು ಜ್ಞಾಪಿಸಿ ನಿಮ್ಮ ಇಂದಿನ ಸಂತೋಷವನ್ನು ಕೊಲ್ಲಬೇಡಿ.
- ನಿಮ್ಮನ್ನು ನೀವೇ ಗಂಭೀರವಾಗಿ ತೆಗೆದುಕೊಳ್ಳಬೇಡಿ. ಯಾಕೆಂದರೆ ಬೇರೆ ಯಾರೂ ನಿಮ್ಮನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ.
- ಜೀವನ ಒಂದು ಶಾಲೆಯಿದ್ದಂತೆ. ಸಮಸ್ಯೆಗಳು ಬೀಜಗಣಿತದ ಲೆಕ್ಕಗಳಂತೆ ಕರಗಿ ಉತ್ತಮ ಪಾಠ ಕಲಿಸುತ್ತವೆ. ಸಮಸ್ಯೆಗಳನ್ನು ಉತ್ಸಾಹದಿಂದ ಎದುರಿಸಿ.
- ನಿಮ್ಮ ಉದ್ಯೋಗ ನಿಮ್ಮನ್ನು ನೀವು ನಿವೃತ್ತಿಯಾಗುವವರೆಗೂ ಕಾಯುವುದು. ನಿಮ್ಮ ಕುಟುಂಬ, ಸಂಬಂಧಿಗಳು ಮತ್ತು ಮಿತ್ರರು ಮಾತ್ರ ನಿಮ್ಮೊಡನೆ ಯಾವಾಗಲೂ ಇರುವವರು. ಅವರಿಗೆ ಯಾವಾಗಲೂ ಸಮಯ ಕೊಡಿ.
- ಎಲ್ಲರನ್ನೂ ಕ್ಷಮಿಸುತ್ತಾ, ಅವರ ತಪ್ಪುಗಳನ್ನು ಮರೆಯುತ್ತಾ ಮುಂದೆ ಸಾಗಿ.
READ MORE
ಇತಿಹಾಸದ ಒಂದು ಅದ್ಬುತ ಕ್ಷಣ
ಅಟಲ್ ಜೀ ಕಣ್ಣಂಚು ಆ ಕ್ಷಣ ಒದ್ದೇಯಾಗಿತ್ತು “.ಹದಿನೈದು ವರ್ಷಗಳ ಹಿಂದೆ ಅಟಲ್ಜೀ ಅಂತಹದೊಂದು
ಎದೆಗಾರಿಕೆಯ ಸಾಹಸಕ್ಕೆ ಮುನ್ನುಡಿ ಬರೆದರು. ಅಬ್ದುಲ್ ಕಲಾಂ ಸೇರಿದಂತೆ ಅತ್ಯುನ್ನತ ವಿಜ್ಞಾನಿಗಳು ಜೊತೆಯಾದರು. ಭಾರತ ಜಗತ್ತಿನ ಅರಿವಿಗೆ ಬಾರದಂತೆ ಯಶಸ್ವಿ ಅಣ್ವಸ್ತ್ರ ಪ್ರಯೋಗ
ನಡೆಸಿಯೇ ಬಿಟ್ಟಿತು. ತನ್ನ ತಾಕತ್ತನ್ನು ಮನವರಿಕೆ ಮಾಡಿಸಿತು. ಆ ಪ್ರಯೋಗಕ್ಕೀಗ ಹದಿನೈದರ ಸಂಭ್ರಮ. ಆದರೆ, ಯಾರಿಗೆಷ್ಟು ನೆನಪಿದೆ! ?
ಮೇ ೧೧ರ ಆ ಕತೆಯೇ ರೋಚಕ. ೧೩ ದಿನಗಳ ಅಧಿಕಾರ ದಕ್ಕಿದಾಗ ಅಟಲ್ ಜೀ ಮಾಡಿದ ಮೊದಲ ಕೆಲಸವೇ ವಿಜ್ಞಾನಿಗಳನ್ನು ಕರೆದು ” ಭಾರತವನ್ನು ಗಂಡು
ರಾಷ್ಟ್ರವಾಗಿಸುತ್ತೀರಾ” ಎಂದು ಎಂದು ಕೇಳಿದ್ದು. ವಿಜ್ಞಾನಿಗಳ ಮುಖದಲ್ಲಿ ಮಂದಹಸ ಮಿನುಗಿತ್ತು.ಅವರೇನೋ ತಯಾರಿ ಶುರುವಿಟ್ಟರು. ಪಾಪ,
ಸರ್ಕಾರವೇ ೧೩ ದಿನಗಳಲ್ಲಿ ಬಿದ್ದುಹೋಯ್ತು. ರಾಷ್ಟ್ರಕ್ಕೆ ಅದೆಷ್ಟು ಬೇಸರವಾಯ್ತೋ, ಪರಮಾಣು ಸಂಶೋಧನಾನಿರತ
ವಿಜ್ಞಾನಿಗಳಂತೂ ತಲೆಯ ಮೇಲೆ ಕೈ ಹೊತ್ತರು.ಆಮೇಲೆ ಬಂದ ಐ.ಕೆ.ಗುಜರಾಲ್ ರನ್ನು,ದೇವೇಗೌದರನ್ನು ಪರಿಪರಿಯಾಗಿ ಕೇಳಿಕೊಂಡರೂ ಅವರು ಅಣ್ವಸ್ತ್ರ
ಪರೀಕ್ಷೆಗೆ ಒಪ್ಪಲೇ ಇಲ್ಲ. ಇರುವಷ್ಟು ದಿನ ಆರಾಮಾಗಿ ಕಾಲ ಕಳೆದರೆ ಸಾಕೆಂಬುದು ಅವರ ಇಚ್ಛೆ.ವಿಜ್ಞಾನಿಗಳಿಗೆ ಆಸೆಯಂತೂ ಇದ್ದೇ ಇತ್ತು.
ಭಾರತವನ್ನು ಜಗತ್ತಿನ ಅಣ್ವಸ್ತ್ರ ರಾಷ್ಟ್ರಗಳ ಪಟ್ಟಿಯಲ್ಲಿ ನಿಲ್ಲಿಸಬಲ್ಲ ಆ ಧೀರ,ಪ್ರಧಾನಿಯಾಗಿ ಮತ್ತೆ ಬಂದೇ ಬರುತ್ತಾನೆಂಬ
ಭರವಸೆಯೂ ಇತ್ತು. ಹಾಗೆಯೇ ಆಯಿತು. ೯೮ರಲ್ಲಿ ಅಟಲ್ ಜೀ ಮತ್ತೆ ಪ್ರಧಾನಿಯಾದರು. ಬಹುಮತವಿಲ್ಲದ
ಸರ್ಕಾರ ಅದು. ಹೀಗಾಗಿ ಸರ್ಕಾರ ಉರುಳುವ ಮುನ್ನ ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು.ಆಗಿಂದಾಗಲೇ ಅವರು ಅಬ್ದುಲ್ ಕಲಾಮರನ್ನು ,
ಚಿದಂಬರಂರನ್ನು ಕರೆದು ಯೋಜನೆ ನೆರವೇರಿಸುವುದು ಸಾಧ್ಯವೇ ಎಂದು ಕೇಳಿಕೊಂಡರು
ನೀವು ಅಧಿಕಾರ ಕಳಕೊಂಡರೂ ನಾವು ನಮ್ಮ ಸಂಶೋಧನೆ ನಿಲ್ಲಿಸಲಿಲ್ಲ. ಹೀಗಾಗಿ ಈ ಬಾರಿ ಬರೀ ಅಣ್ವಸ್ತ್ರವಲ್ಲ , ಹೈಡ್ರೋಜನ್ ಬಾಂಬನ್ನೇ ಸಿಡಿಸಿ
ಪರೀಕ್ಷಿಸೋಣ ಎಂದುಬಿಟ್ಟರು.ಪ್ರಧಾನಿಗಂತೂ ಸ್ವರ್ಗಕ್ಕೆ ಮೂರೇ ಗೇಣು.ಪೋಖರಣ್ನಲ್ಲಿ…ಸವಾಲು ಸುಲಭವಾಗಿರಲಿಲ್ಲ. ಅಮೆರಿಕಾದ ೪
ಉಪಗ್ರಹಗಳು ಭಾರತವನ್ನೇ ಎಚ್ಚರಿಕೆಯಿಂದ ಗಮನಿಸುತ್ತಿದ್ದವು. ಅಮೆರಿಕಾದ್ ಗೂಢಚಾರರು ಭಾರತದುದ್ದಗಲಕ್ಕೂ ಕದ್ದುಮುಚ್ಚಿ ತಿರುಗಾಡುತ್ತಿದ್ದರು.
ಅನೇಕ ಬಾರಿ ಜತೆಗಿದ್ದವರೇ ಅಮೆರಿಕಾದ್ ಏಜೆಂಟರಾಗಿರುವ ಸಂಭವವೂ ಇತ್ತು. ಕನಸೇನೋ ಭರ್ಜರಿ. ಆದರೆ
ಅದನ್ನು ನನಸು ಮಾಡುವಲ್ಲಿ ಪ್ರಯಾಸವೂ ಜೋರಾಗಿಯೇ ಇತ್ತು.ಅಟಲ್ ಜೀ ಎದೆಯೊಡ್ಡಿ ಸಿದ್ಧರಾಗಿದ್ದರು.ಯೋಜನೆ ರೂಪುಗೊಂಡಿತು. ಕಲಾಂ ,
ಚಿದಂಬರಂ , ಅಟಲ್ ಜೀ ಮತ್ತು ಅವರ ಕಾರ್ಯದರ್ಶಿ ಬ್ರಜೇಶ್ ಮಿಶ್ರಾರಿಗೆ ಬಿಟ್ಟರೆ ಏನಾಗಲಿದೆ ಎನ್ನುವುದು ಐದನೆಯವರಿಗೆ ಗೊತ್ತಿರಲಿಲ್ಲ. ನಿಮಗೆ
ಆಶ್ಚರ್ಯವಾದೀತು. ಅಣ್ವಸ್ತ್ರ ಪರೀಕ್ಷೆ ಮೇ ೧೧ರಂದು ನಿಗದಿಯಾಗಿದೆಯೆಂಬುದು ಅಂದಿನ ರಕ್ಷಣಾ ಸಚಿವರಿಗೆ, ಗೃಹಸಚಿವರಿಗೆ ತಿಳಿದಿದ್ದು ಮೇ ೧೦ರ
ಸಂಜೆಯೇ!ಪೋಖರಣ್ ಅನ್ನು ಈ ಯೋಜನೆಗೆ ಆರಿಸಿಕೊಳ್ಳಲಾಗಿತ್ತು.ಅದಕ್ಕೆ ಕಾರಣವೂ ಇತ್ತು. ಸುತ್ತಲೂ ಮರಳ ರಾಶಿ , ನೀರಿನ
ಸೆಲೆಯೂ ಬಲು ಆಳದಲ್ಲಿತ್ತು. ಹೀಗಾಗಿ ತಗ್ಗು ತೋಡುವಾಗ ತೊಂದರೆಯೂ ಇಲ್ಲ , ಆಳಕ್ಕೆ ಹೋದಂತೆ
ನೀರನ್ನು ಬಸಿಯಬೇಕಾದ ಸಮಸ್ಯೆಯೂ ಇಲ್ಲ.ಸೈನ್ಯದ ೫೮ ಇಂಜಿನಿಯರ್ ಗಳ ಬ್ರಿಗೇಡ್ ಹಳ್ಳ ತೋಡುವ ಕೆಲಸ ಶುರು ಮಾಡಿತು.
ಈ ಕೆಲಸವನ್ನು ಬೆಳಿಗ್ಗೆ ಮಾಡುವಂತಿಲ್ಲ. ಕತ್ತಲಾದ ಮೇಲೆ ಕೆಲಸ ಶುರು ಮಾಡಬೇಕು. ಬೆಳಗಾಗುವುದರೊಳಗಾಗಿ ವಸ್ತುಗಳು ,ವಾಹನಗಳು ಎಲ್ಲೆಲ್ಲಿದ್ದವೋ
ಅಲ್ಲಲ್ಲಿಯೇ ಇಟ್ಟು ಮಾಯವಾಗಬೇಕು. ಇಲ್ಲವಾದಲ್ಲಿ ಅಮೆರಿಕಾದ ೪ ಉಪಗ್ರಹಗಳು ಜಗತ್ತಿನಾದ್ಯಂತ
ಬೊಂಬಡಾ ಬಜಾಯಿಸಿಬಿಡುತ್ತವೆ. ಆಮೇಲೆ ಅಣ್ವಸ್ತ್ರ ಪರೀಕ್ಷೆ ಇರಲಿ , ಅದರ ಮಾತಾಡುವುದೂ ಕಷ್ಟ. ಸೈನಿಕರು ತಗ್ಗು ತೋಡಿ
ವಿಜ್ಞಾನಿಗಳಿಗೆ ದಾರಿ ಮಾಡಿಕೊಟ್ಟರು. ದೂರದೂರದಿಂದ ಪರಿಸರ ವಿಜ್ಞಾನಿಗಳು ಬಂದು ಸುತ್ತಲಿನ ವಾತಾವರಣದ ಅಧ್ಯಯನ ಮಾಡಿ ವರದಿ ನೀಡಿ ಹೋಗುತ್ತಿದ್ದರು. ಆದರೆ
ಯಾರೊಬ್ಬರಿಗೂ ತಾವು ಇದನ್ನೆಲ್ಲ ಯಾವ ಉದ್ದೇಶಕ್ಕಾಗಿ ಮಾಡುತ್ತಿದ್ದೇವೆ ಎಂಬುದು ಮಾತ್ರ ಗೊತ್ತಿರಲಿಲ್ಲ, ಅಷ್ಟು ಗುಪ್ತವಾಗಿ ಉಳಿದಿತ್ತು
ಯೋಜನೆ! ಅಬ್ದುಲ್ ಕಲಾಂ , ಚಿದಂಬರಂ , ಕಾಕೋಡ್ಕರ್ ರಂತಹ ವಿಜ್ಞಾನಿಗಳು ಅನುಮಾನ ಬರದಿರಲೆಂದು ಸೈನಿಕ ವೇಷ ಧರಿಸಿದರು. ಉನ್ನತ ಹುದ್ದೆಯನ್ನೇ ಅವರುಗಳಿಗೆ
ನೀಡಲಾಗಿತ್ತು. ರಾಜಸ್ತಾನದ ಆ ಬಿರುಬಿಸಿಲಿನಲ್ಲಿ, ಉರಿಯುವ ಟೆಂಟುಗಳಲ್ಲಿ ಎಸಿ ಇರಲಿ , ಫ್ಯಾನೂ ಇಲ್ಲದೆ ಕೆಲಸ ಮಾಡಬೇಕಿತ್ತು. ಗಾಳಿಗೆ
ವೈರುಗಳು ಒಂದಕ್ಕೊಂದು ತಿಕ್ಕಾಡಿ ಬೆಂಕಿ ಹೊತ್ತಿಕೊಂಡರೆ ಪ್ರಮಾದವಾದೀತೆಂಬ ಹೆದರಿಕೆ ಇದ್ದೇ ಇತ್ತು.ಇತ್ತ ಅಟಲ್ ಜೀ ಕಾಯುತ್ತಲಿದ್ದರು.ಮೇ ೧೦ಕ್ಕೆ
ರಾಷ್ಟ್ರಪತಿಗಳು ವಿದೇಶ ಪ್ರವಾಸ ಮುಗಿಸಿ ಬರಲಿದ್ದಾರೆ.ಅದರ ಮರುದಿನವೇ ಪರೀಕ್ಷಣೆ ನಡೆದುಬಿಡಲಿ ಎಂದು ಅವರ ಯೋಚನೆ. ವಿಜ್ಞಾನಿಗಳೂ ಸಿದ್ಧತೆ
ಪೂರ್ಣಗೊಳಿಸಿದ್ದರು. ವೈಟ್ ಹೌಸ್, ತಾಜ್ ಮಹಲ್ ಎಂಬ ಎರಡು ತಗ್ಗುಗಳು , ನವ್ ತಾಲ್ ಎಂಬ ೪ ಹಳ್ಳಗಳು ನಿರ್ಮಾಣಗೊಂಡಿದ್ದವು. ವೈಟ್ ಹೌಸ್
ನೊಳಗೆ ಹೈಡ್ರೋಜನ್ ಬಾಂಬ್ ಪರೀಕ್ಷೆ.ತಾಜ್ ಮಹಲ್ ನಿಂದ ಉಡಾಯಿಸಲು ಸಾಮಾನ್ಯ ಬಾಂಬು.
ಉಳಿದವು ಚಿಕ್ಕ ಪ್ರಮಾಣದ ಪರೀಕ್ಷೆಗಳು.ದೊಡ್ಡ ದೊಡ್ಡ ರಿಂಗ್ಗಳನ್ನು ತಗ್ಗಿನೊಳಗೆ ಇಳಿಬಿಡಲು ಮರಳು ತುಂಬಿದ ಚೀಲಗಳನ್ನು
ಮೊದಲು ಇಳಿಸಬೇಕಿತ್ತು. ಅದರ ಂಏಲೆ ರಿಂಗ್ಗಳು ಇಳಿಯಬೇಕು. ಸಮಯ ಬಲು ಕಡಿಮೆ ಇತ್ತು.ಇದ್ದ ಕೆಲವೇ ಸೈನಿಕರು ಹಗಲು ರಾತ್ರಿ ಎನ್ನದೆ
ದುಡಿಯುತ್ತಿದ್ದರು. ನಿಮಿಶಕ್ಕೆ ೩ ಮರಳ ಚೀಲವಾದರೆ ೨೪ ಗಂಟೆಗೆ಼ಷ್ಟು ಎಂಬೆಲ್ಲ ಲೆಕ್ಕಾಚಾರಗಳು ನಡೆದಿದ್ದವು.ಎಲ್ಲರೂ ಕೆಲಸದಲ್ಲಿ ಮೈಮರೆತಿದ್ದರು.ಇದ್ದಕ್ಕಿದ್ದಂತೆ
ಒಂದೆರಡು ರಕ್ತದ ಹನಿ ಚೆಲ್ಲಿದ್ದು ಕಂಡುಬಂತು.ಜಾಡು ಹುಡುಕಿಕೊಂಡು ಹೊರಟರೆ , ಸೈನಿಕರ ಬಟ್ಟೆ ತೊಳೆಯುವ ದೋಭಿ ಎನ್.ಕೆ.ಡೇ , ತಾನೂ ಮರಳ
ಚೀಲ ಹೊರುವ ಕೆಲಸಕ್ಕೆ ಬಂದುಬಿಟ್ಟಿದ್ದ. ಅವನ ಕೈಗೆ ಮರಳುಗಾಡಿನ ವಿಷಪೂರಿತ ಚೇಳೊಂದು ಬಲವಾಗಿ ಕುಟುಕಿಬಿಟ್ಟಿತ್ತು.
ಅದರಿಂದ ವನ ಚರ್ಮ ಸೀಳಿ, ರಕ್ತ ಸುರಿದಿತ್ತು. ಧೋಬಿಗೆ ಮಾತ್ರ ಅದರ ಅರಿವೂ ಆಗಲಿಲ್ಲ. ಆತ ತನ್ನ ಪಾಡಿಗೆ ತಾನು ಕೆಲಸ ಮುಂದುವರೆಸಿದ್ದ. ಭಾರತದ
ಮಹತ್ಸಾಧನೆಯೊಂದಕ್ಕೆ ಮುನ್ನುಡಿ ಬರೆಯಲಿದೆ. ಅದರಲ್ಲಿ ತಾನೂ ಭಾಗಿ ಎಂಬ ಯೋಚನೆಯೇ ಅವನನ್ನು ರೋಮಾಂಚನಗೊಳಿಸಿಬಿಟ್ಟಿತ್ತು.
ಅತ್ತ ಮುಂಚಿನ ದಿನ ಪೋಖರಣ್ ನ ಪಕ್ಕದ ಹಳ್ಳಿ ಖಟೋರಿಯಲ್ಲಿ ನಾಳೆ ಮನೆಯಲ್ಲಿ ಯಾರೂ ಇರಬೇಡಿ , ಶಾಲೆಗೆ
ರಜೆ ಕೊಡಿ, ಸೈನ್ಯದ ಒಂದಷ್ಟು ಚಟುವಟಿಕೆಗಳನ್ನು ನಡೆಸಬೇಕಿದೆ ಎಂದು ವಿನಂತಿಸಲು ಅಧಿಕಾರಿಯೊಬ್ಬರು ಹೋಗಿದ್ದರು.ಸೋಹ್ರಂ ಎಂಬ ವ್ಯಕ್ತಿಯೊಬ್ಬ
ಅಧಿಕಾರಿಯ ಬಳಿ ಬಂದು, ನನಗೆ ಗೊತ್ತು , ಬಾಂಬ್ ಪರೀಕ್ಷೆ ನಡೆಸುತ್ತಿದ್ದೀರಿ ತಾನೆ ? ೧೯೭೪ರಲ್ಲೂ ಹೀಗೇ ಆಗಿತ್ತು. ಅವತ್ತು ನಮ್ಮ
ಮನೆಯ ಸೂರು ಸೀಳಿಹೋಗಿತ್ತು. ಮನೆ ಬಿದ್ದರೂ ಚಿಂತೆಯಿಲ್ಲ, ನೀವು ಮುಂದುವರೆಸಿರಿ ; ನಾವು ನಿಮ್ಮೊಂದಿಗಿದ್ದೇವೆ ’ ಎಂದಿದ್ದ.ಅಧಿಕಾರಿ ಅವಾಕ್ಕಾಗಿ
ಸೋಹ್ರಂನನ್ನು ತಬ್ಬಿಕೊಂಡಿದ್ದ.ಕೊನೆಗೂ ಆ ಸಮಯ ಬಂದುಬಿಟ್ಟಿತ್ತು.ಮೇ ೧೦ಕ್ಕೆ ಆಕಾಶ ಬಿರಿಯುವಂತಹ ಮಳೆ.ಗುಡುಗು ಸಿಡಿಲುಗಳು ಎಲ್ಲರನ್ನೂ ಆತಂಕಕ್ಕೆ
ನೂಕಿಬಿಟ್ಟಿದ್ದವು. ಎರಡು ಗೋಲಗಳಲ್ಲಿ ತುಂಬಿಟ್ಟಿದ್ದ ಪ್ಲುಟೋನಿಯಮ್ ಮಿಸುಕಾಡಿದ್ದರೆ ಅನಾಹುತವೇ ಕಾದಿತ್ತು. ಇಡಿಯ ಯೋಜನೆಯ ಮಹತ್ವದ ಕೊಂಡಿಯಾಗಿದ್ದ
ವಿಜ್ಞಾನಿ ಕಾಕೋಡ್ಕರ್ ರ ತಂದೆ ತೀರಿಕೊಂಡ ಸುದ್ದಿ ಬಂತು. ಎಲ್ಲರ ಮುಖವೂ ಕಪ್ಪಿಟ್ಟಿತು. ಕಾಕೋಡ್ಕರ್ ಊರಿಗೆ ಧಾವಿಸಿ ,ತಂದೆಯ ಅಂತ್ಯ ಸಂಸ್ಕಾರ ಮುಗಿಸಿ , ಮುಂದಿನ
ಅನುಷ್ಠಾನಗಳಿಗೆ ಕಾಯದೇ ಮರಳಿ ಬಂದುಬಿಟ್ಟರು.
ನಮ್ಮಪ್ಪ ಇದ್ದಿದ್ದರೆ ,ಹೀಗೇ ಮಾಡಲು ಹೇಳಿರುತ್ತಿದ್ದರು ’ ಎಂದರು.ಮರುದಿನದ ವೇಳೆಗೆ ಎಲ್ಲ ಬಗೆಯ ಮೋಡಗಳೂ ತಿಳಿಯಾದವು.
ಬಿರುಬಿಸಿಲೂ ಬಂದಿತು. ಇನ್ನೇನು ಪರೀಕ್ಷೆ ಶುರುವಾಗಬೇಕು, ಅಷ್ಟರಲ್ಲಿ ಅನಿರೀಕ್ಷಿತವಾಗಿ ಬಿರುಗಾಳಿ ಶುರುವಾಯ್ತು. ಮತ್ತೊಂದು ಬಗೆಯ ಹೆದರಿಕೆ ಈಗ.
ಅಣ್ವಸ್ತ್ರ ಪರೀಕ್ಷೆ ಒಂದು ಗಂಟೆ ಮುಂದೆ ಹೋಯ್ತು. ಇತ್ತ ವಿಜ್ಞಾನಿಗಳ ಮುಖ ಬೆಪ್ಪಾಯ್ತು.ಅತ್ತ ಪ್ರಧಾನಮಂತ್ರಿಗಳ ಮನೆಯಲ್ಲಿ ಅಟಲ್
ಜೀ, ಅಡ್ವಾಣಿ ಮತ್ತು ಜಾರ್ಜ್ ರ ಮುಖದಲ್ಲಿ ಆತಂಕದ ಗೆರೆಗಳು. ಬ್ರಜೇಶ್ ಮಿಶ್ರಾ ನಿರಂತರ ಫೋನಿಗೆ ಕಿವಿಗೊಟ್ಟು ಕೂತಿದ್ದಾರೆ. ಯಾವುದನ್ನೂ ನೇರವಾಗಿ
ಕೇಳುವಂತಿಲ್ಲ. ಎಲ್ಲವನ್ನೂ ಸಂಕೇತ ಭಾಷೆಯಲ್ಲೇ ಕೇಳಬೇಕು.ಒಂದು ಗಂಟೆಯ ನಂತರ ಬಿರುಗಾಳಿ ನಿಂತಿತು.ಮರಳು ಶಾಂತವಾಯ್ತು. ವಿಜ್ಞಾನಿಗಳು ಕಾರ್ಯಪ್ರವೃತ್ತರಾದರು.
ಸ್ಪರೀಕ್ಷೆಯ
ಪರಿಣಾಮಗಳನ್ನು ಸೆರೆಹಿಡಿಯಲು ಕ್ಯಾಮೆರಾವೊಂದನ್ನು ನೇತುಹಾಕಲಾಗಿತ್ತು. ವಿಜ್ಞಾನಿಗಳು ಗಣನೆ ಶುರುಮಾಡಿದರು. ೫…೪ …೩…೨ …೧…. ಅವರೆದುರಿನ ಟೀವಿ ಪರದೆಯಲ್ಲಿ
ಸಹಸ್ರ ಮಿಂಚುಗಳು ಸಿಡಿದಂತಹ ಬೆಳಕು ಧಿಗ್ಗನೆ ಕಂಡಿತು. ಒಮ್ಮೆ ಕುಳಿತ ಭೂಮಿ ಅಲುಗಾಡಿತು.ಭೂಮಿಯೊಳಗಿನ ಆ ಅಲುಗಾಟ ರಿಕ್ಟರ್ ಮಾಪಕದಲ್ಲಿ
ಒಂದಷ್ಟು ಸಂಕೇತವನ್ನು ಗೀಚಿತು.ವಿಜ್ಞಾನಿಗಳ ಪ್ರಯತ್ನ ಸಾರ್ಥಕವಾಯ್ತು. ಅವರು ಕುಣಿದಾಡುತ್ತ ಪ್ರಧಾನ ಮಂತ್ರಿಗಳಿಗೆ ಸುದ್ದಿ ಮುಟ್ಟಿಸಿದರು. ` ವೈಟ್ ಹೌಸ್
ಸಿಡಿಯಿತು, ಬುದ್ಧ ಮತ್ತೆ ನಕ್ಕ! ’ ಅಟಲ್ ಜೀ ಕಣ್ಣಂಚು ಒದ್ದೆಯಾಯ್ತು. ಜಾರ್ಜ್, ಅಡ್ವಾಣಿಯರೂ ಅಷ್ಟೇ ಭಾವುಕರಾಗಿದ್ದರು. ಅಮೆರಿಕಾ ಬೆಕ್ಕಸ ಬೆರಗಾಗಿತ್ತು. ಕೋಟ್ಯಂತರ
ಡಾಲರುಗಳನ್ನು ಸುರಿದೂ ಅದು ಭಾರತದ ಅಣ್ವಸ್ತ್ರ ಪರೀಕ್ಷೆಯ ಜಾಡು ಹಿಡಿಯುವಲ್ಲಿ ಸೋತಿತ್ತು. ಭಾರತ ಮಾತ್ರ ಎದೆಯುಬ್ಬಿಸಿ ಬೀಗುತ್ತ ಜಗದೆದುರು ನಿಂತಿತ್ತು.
೧೫ ವರ್ಷಗಳು ಸರ್ರನೆ ಕಳೆದುಹೋಯ್ತು. ದೇಶದ ಆತ್ಮಗೌರವ ರಕ್ಷಣೆಗೆ ಕಣಕಣವನ್ನು ಬಸಿದ ವಿಜ್ಞಾನಿಗಳು ಸಾಮಾನ್ಯ ಜನರ ಪಾಲಿಗೆ ಹೀರೋಗಳೆನಿಸಲೇ ಇಲ್ಲ. ಕೇವಲ
ಕ್ರಿಕೇಟಿಗರು, ಸಿನಿಮಾ ತಾರೆಯರೆ ಜನರ ಪಾಲಿಗೇನಿದ್ದರು ಹಿರೋಗಳೇ ಅನಿಸಿಕೋಳ್ಳುತ್ತಿದ್ದಾರೇ. ಅಟಲ್ ಜೀ, ಅಬ್ದುಲ್ ಕಲಾಂ ಜೀ ಮತ್ತು ಎಲ್ಲ
ವಿಜ್ಞಾನಿಗಳೇ ಧನ್ಯವಾದಗಳು ನಿಮ್ಮ ದೇಶ ಸೇವೆಗೆ.
ಟ್ವೀಟ್ ಟಾನಿಕ್
ಚೀನಾ ಮಹಾಗೋಡೆಯೇನಾದರೂ ನಮ್ಮ ದೇಶದಲ್ಲಿದ್ದಿದ್ದರೆ ಜಗತ್ತಿನ ಅತಿ ಉದ್ದದ ಶೌಚಾಲಯ ಹೊಂದಿರುವ ಖ್ಯಾತಿ ನಮ್ಮದೇ ಆಗಿರುತ್ತಿತ್ತು.
ತನ್ನ ಮಾತು ಕೇಳುವ ಗಂಡನನ್ನು ಮಹಿಳೆ ಇಷ್ಟಪಡುತ್ತಾಳೆ. ಕಡಿಮೆ ಮಾತನಾಡುವವಳೇ ಹೆಂಡತಿಯಾಗಿ ಬರಲಿ ಎಂದು ಗಂಡ ಅಂದುಕೊಳ್ಳುತ್ತಾನೆ.
ತಾಯ್ತನ ಎಂಬುದು ಎಲ್ಲ ಸ್ತ್ರೀಯರೂ ಬಯಸುವ ಅವಕಾಶ. ಹಾಗಂತ ಅವಕಾಶ ಸಿಕ್ಕಿತೆಂದು ತಾಯಿಯಾಗಬಾರದು.
ನಾವು ಬೇರೆಯವರಿಗೆ ಸಹಾಯ ಮಾಡುವುದಕ್ಕೆ ಈ ಜಗತ್ತಿಗೆ ಬಂದಿದ್ದೇವೆ ಎಂಬ ವಿಚಾರವೇನೊ ಚೆನ್ನಾಗಿದೆ. ಆದರೆ ಆ ಬೇರೆಯವರು ಏನು ಮಾಡಲು ಬಂದಿದ್ದಾರೆ?
ಅಕಸ್ಮಾತ್ತಾಗಿ ಹಾವನ್ನು ತುಳಿದು ಕಚ್ಚಿಸಿಕೊಳ್ಳುವುದು ಅರೇಂಜ್ಡ್ ಮ್ಯಾರೇಜ್. ಹಾವಿನ ಮುಂದೆ ನಿಂತು ಕಡಿ, ಕಡಿ ಎಂದು ಕುಣಿಯುತ್ತಾ ಕಚ್ಚಿಸಿಕೊಳ್ಳುವುದು ಲವ್ ಮ್ಯಾರೇಜ್.
ಫೋನ್ ಕಾಲ್ ರಿಸೀವ್ ಮಾಡುವುದಕ್ಕೆ ನೀವು ಹೆಚ್ಚು ಸಮಯ ತೆಗೆದುಕೊಳ್ಳುತ್ತೀರೆಂದರೆ, ರಿಸೀವ್ ಮಾಡಿದ ಮೇಲೆ ದೊಡ್ಡ ಸುಳ್ಳು ಹೇಳಲಿದ್ದೀರೆಂದರ್ಥ.
ಬೇರೆಯವರಿಗಾಗಿ ಒಳ್ಳೆಯ ಕೆಲಸಮಾಡುತ್ತಲೇ ಹೋದರೆ ಅದು ಸಹಜ ಎನ್ನಿಸಿಬಿಡುತ್ತದೆ. ಗಮನ ಸೆಳೆಯುವುದಕ್ಕಾದರೂ ಕೆಲವೊಮ್ಮೆ ತಪ್ಪು ಮಾಡುತ್ತಿರಬೇಕಾಗುತ್ತದೆ.
ದೆಹಲಿ ಹೆಂಗಸರಿಗೆ ಸುರಕ್ಷಿತವಲ್ಲ. ನೋಡಿ ಶೀಲಾ ದೀಕ್ಷಿತ್ ಅವರಿಗೇನಾಯಿತು.
ವಾದ್ರಾ ಪ್ರಧಾನಿಯಾಗಲಿ ಎಂದು ಬಯಸುತ್ತೇನೆ. ಭೂಮಿ ಬಗ್ಗೆ ಈ ವ್ಯಕ್ತಿಯ ಹಸಿವನ್ನು ನೋಡಿದರೆ, ಕಾಶ್ಮೀರ ಹಾಗಿರಲಿ, ಲಾಹೋರ್- ಇಸ್ಲಾಮಾಬಾದ್ಗಳನ್ನು ಉಳಿಸಿಕೊಡಿ ಅಂತ ಪಾಕಿಸ್ತಾನ ಕೇಳಬಹುದು.
ಭಾರತೀಯ ರಾಜಕಾರಣಿಗಳನ್ನು ಮೂರ್ಖರು ಎನ್ನುವಂತಿಲ್ಲ. ಜನಕ್ಕೆ ಹಾಗೆ ಹೇಳಬಹುದು. ಪ್ರತಿಬಾರಿಯೂ ನೂರು ಕೋಟಿ ಮಂದಿಯನ್ನು ಅವರು ನಂಬಿಸುತ್ತಾರೆ.
ಹೆಂಗಸರ ಬಳಿ ಉಳಿದುಕೊಳ್ಳಬಹುದಾದ ಒಂದೇ ಒಂದು ರಹಸ್ಯ ಎಂದರೆ- ಅವರ ವಯಸ್ಸು.
ದೇವರು ಪ್ರತಿಯೊಬ್ಬ ಪುರುಷನಿಗೂ ಒಬ್ಬ ಮಹಿಳೆಯನ್ನು ಸೃಷ್ಟಿಸಿರುತ್ತಾನೆ. ಆಕೆಯಿಂದ ತಪ್ಪಿಸಿಕೊಂಡರೆ, ಜೀವನ ಅದ್ಭುತವಾಗಿರುತ್ತದೆ.
ಯಾವ ವ್ಯಕ್ತಿಯೂ ಆತನ ಹೆಂಡತಿ ತಿಳಿದುಕೊಂಡಷ್ಟು ಕೆಟ್ಟವನಾಗಿರುವುದಿಲ್ಲ. ಹಾಗೆಯೇ ಅವನ ಅಮ್ಮ ಅಂದುಕೊಂಡಷ್ಟು ಒಳ್ಳೆಯವನೂ ಆಗಿರುವುದಿಲ್ಲ.
ಮಲಗುವಾಗ ಯಾವ ತೊಂದರೆಗಳನ್ನೂ ಹಾಸಿಗೆಗೆ ತೆಗೆದುಕೊಂಡುಹೋಗಬೇಡಿ ಎನ್ನುತ್ತದೆ ಹಳೆಯ ಉಪದೇಶ. ಆದರೆ ಇವತ್ತಿಗೂ ಹೆಚ್ಚಿನವರು ತಮ್ಮ ಹೆಂಡತಿ ಪಕ್ಕದಲ್ಲೇ ಮಲಗುತ್ತಾರೆ.
ಕೆಲವು ಗಂಡಸರ ಸಂಕಟ ವಿಚಿತ್ರವಾಗಿರುತ್ತದೆ. ಹೆಂಡತಿಯ ಮೇಕಪ್ ಖರ್ಚು ಭರಿಸಲಾಗುವುದಿಲ್ಲ. ಆದರೆ ಮೇಕಪ್ಗೆ ಖರ್ಚು ಮಾಡದಿದ್ದರೆ ಹೆಂಡತಿಯನ್ನು ಸಹಿಸಲಾಗುವುದಿಲ್ಲ.
ದಾಂಪತ್ಯ ಚೆನ್ನಾಗಿ ಇರಬೇಕೆಂದರೆ ಮುಖ್ಯವಾಗಿ ಸರಸವಿರಬೇಕು. ಅತಿಮುಖ್ಯವಾಗಿ ಅದು ನಮ್ಮ ಸಂಗಾತಿಯೊಂದಿಗೇ ಇರಬೇಕು.
ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕು ಎಂಬ ಗಾದೆ ಮಾತಿದೆ. ಹಾಗೆಂದು ತುಪ್ಪ ತಿನ್ನಬೇಕು ಎಂದೆನಿಸಿದಾಗಲೆಲ್ಲ ಸಾಲ ಮಾಡಬಾರದು.
ಮಿಷನ್ ಇಂಪಾಸಿಬಲ್ ಚಿತ್ರವನ್ನು ಕನ್ನಡದಲ್ಲಿ ಮಾಡುವುದಾದರೆ ‘ಇದು ಅಸಾಧ್ಯ’ ಎಂಬ ಹೆಸರಿಡಬಹುದು. ಮಿಷನ್ ಇಂಪಾಸಿಬಲ್-2 ಮಾಡುವುದಾದರೆ ಆ ಚಿತ್ರಕ್ಕೆ ಇಡಬಹುದಾದ ಹೆಸರು, ನಾವು ಮೊದ್ಲೇ ಹೇಳಿದ್ವಿ ಇದು ಅಸಾಧ್ಯ ಅಂತ.
ನೀವು ಅಂದುಕೊಂಡಂತೆ ಜೀವನ ಸಾಗುತ್ತಿಲ್ಲವೆಂದಾದರೆ ನೀವು ಭವಿಷ್ಯಕ್ಕಿಂತ ಹೆಚ್ಚಾಗಿ ಭೂತಕಾಲದ ಬಗ್ಗೆಯೇ ಯೋಚನೆ ಮಾಡುತ್ತಿದ್ದೀರಿ ಎಂದರ್ಥ. ಹೀಗಾಗಿ ಕಳೆದುಹೋದ ಸಂಗತಿ ಬಿಟ್ಟು ಮುಂದಿನ ಜೀವನದ ಬಗ್ಗೆ ಗಮನಹರಿಸಿ.
ಅದೃಷ್ಟವೆಂಬುದು ನಿಮ್ಮ ಮನೆಯ ಬಾಗಿಲನ್ನು ಬಡಿಯದಿದ್ದರೆ ಬೇಸರಿಸಿಕೊಳ್ಳಬೇಡಿ. ಬಡಿಯಲು ನಿಮ್ಮ ಮನೆಗೆ ಬಾಗಿಲೇ ಇಲ್ಲದಿರಬಹುದು. ಮೊದಲು ಬಾಗಿಲನ್ನು ನಿಲ್ಲಿಸುವ ಕೆಲಸ ಮಾಡಿ. ಪರಿಶ್ರಮಪಡದಿದ್ದರೆ ಅದೃಷ್ಟವೂ ನಿಮ್ಮ ಮನೆ ತನಕ ಬರುವುದಿಲ್ಲ.
ನಿಮಗೇನು ಅನ್ನಿಸುತ್ತೆ ಎಂಬುದರ ಮೇಲೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಆದರೆ ನೀವು ಏನು ತಿಳಿದುಕೊಂಡಿದ್ದೀರಿ ಎಂಬುದರ ಮೇಲೆ ನಿರ್ಧಾರ ತೆಗೆದುಕೊಳ್ಳಿ. ಏಕೆಂದರೆ ಆ ನಿರ್ಧಾರ ಹೆಚ್ಚು ಗಟ್ಟಿಯಾಗಿರುತ್ತದೆ
ಜಗತ್ತಿನಲ್ಲಿ ನೀವು ನೋಡುತ್ತಿರುವ ಸಂಗತಿಗಳು ನಿಮ್ಮ ಯೋಚನೆಯ ಪ್ರತಿಫಲನಗಳಷ್ಟೇ. ನೀವು ಒಳ್ಳೆಯ ರೀತಿಯಲ್ಲಿ ಯೋಚಿಸಿದರೆ ಜಗತ್ತು ಒಳ್ಳೆಯದಾಗಿರುತ್ತದೆ. ಕೆಟ್ಟ ರೀತಿಯಲ್ಲಿ ಯೋಚಿಸಿದರೆ ಅದೂ ಕೆಟ್ಟದಾಗಿರುತ್ತದೆ.
ಕ್ರಿಯೆ ಮತ್ತು ಯಶಸ್ಸಿನ ನಡುವೆ ಅವಿನಾಭಾವ ಸಂಬಂಧವಿದೆ. ನೀವು ಕೆಲಸವನ್ನೇ ಆರಂಭಿಸದಿದ್ದರೆ ಯಶಸ್ಸು ಕಾಣಲು ಸಾಧ್ಯವೇ ಇಲ್ಲ. ಹೀಗಾಗಿ ಯಶಸ್ಸಿನ ಬೆನ್ನು ಹತ್ತುವ ಮೊದಲು ಯಾವುದಾದರೊಂದು ಕೆಲಸ ಆರಂಭಿಸಿ.
ನಿಮ್ಮಲ್ಲಿರುವ ಜ್ಞಾನ ಎಂದರೆ ಡಬ್ಬದಲ್ಲಿರುವ ಪೈಂಟ್ ಇದ್ದಂತೆ. ಅದನ್ನು ಗೋಡೆಗೆ ಬಳಿದಾಗಲೇ ಅದರ ಮಹತ್ವ ತಿಳಿಯೋದು. ಬರೀ ಡಬ್ಬದಲ್ಲಿದ್ದರೆ ಅದರಿಂದ ಯಾವ ಪ್ರಯೋಜನವೂ ಇಲ್ಲ. ನಿಮ್ಮ ಜ್ಞಾನದಿಂದ ಸುತ್ತಲಿನ ಗೋಡೆಗೆ ವಿವೇಕದ ಬಣ್ಣ ಬಳಿಯಿರಿ.
ಜೀವನದ ಸಾರ್ಥಕ್ಯ ನೀವು ಎಷ್ಟು ಖುಷಿಯಲ್ಲಿದ್ದೀರಿ ಎಂಬುದರ ಮೇಲೆ ನಿರ್ಧಾರವಾಗುವುದಿಲ್ಲ. ಆದರೆ ನಿಮ್ಮಿಂದ ಬೇರೆಯವರು ಎಷ್ಟು ಸಂತೋಷಪಡುತ್ತಾರೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ. ಹೀಗಾಗಿ ನಿಮ್ಮ ಸುತ್ತ ಇರುವವರನ್ನು ಖುಷಿಯಾಗಿಡಲು ಪ್ರಯತ್ನಿಸಿ.
ನಿಮಗೆ ಹಾರಲು ಸಾಧ್ಯವಿಲ್ಲವೇ? ಹಾಗಾದರೆ ಓಡಿ. ನಿಮ್ಮಲ್ಲಿ ಓಡಲು ಶಕ್ತಿ ಇಲ್ಲವೇ, ನಡೆದಾಡಿ. ನಿಮಗೆ ನಡೆಯಲೂ ಆಗದಿದ್ದರೆ ತೆವಳಿಕೊಂಡು ಹೋಗಿ. ನೀವು ಏನೇ ಮಾಡಿ, ಮುನ್ನಡೆಯುತ್ತಲೇ ಇರಿ. ಎಲ್ಲಿಯೂ ನಿಲ್ಲಬೇಡಿ.
ಸುಗಮ ರಸ್ತೆಯಿಂದ ಉತ್ತಮ ಚಾಲಕರಾಗಲು ಸಾಧ್ಯವಿಲ್ಲ. ಮೋಡಗಳಿಲ್ಲದ ಆಕಾಶ ಉತ್ತಮ ಪೈಲಟ್ಗಳನ್ನು ತರಬೇತುಗೊಳಿಸದು. ತೊಂದರೆರಹಿತ ಜೀವನ ಉತ್ತಮ ಮನುಷ್ಯರನ್ನು ರೂಪಿಸಲಾರದು. ಹೀಗಾಗಿ ನನಗೇ ಏಕೆ ಸಮಸ್ಯೆಗಳು ಎಂದು ಕೇಳಬೇಡಿ.
READ MOREಹೀಗೂಂದು thought ಬಂತು ….
ಗರ್ಭದಲ್ಲಿರುವ ಮಗುವಿನಿಂದ ಅಮ್ಮನಿಗೂಂದು request letter….
ಮುದ್ದಿನ ಅಮ್ಮ/Dear motherboard,
Doctor ಅಂಕಲ್ ಮೊನ್ನೆ ನಿಂಗೆ TABLET ತೊಗೊಳಿ ಅಂದಾಗ ನಾನೆಲ್ಲೋ Samsung tabletooo, Sony tabletoo ಬರೆದಿದ್ದಾರೇ ಅಂದ್ಕೂಂಡಿದ್ದೆ, ಡಬ್ಬ Doctoru ಯಾವುದೋ vitamin tablet ಕೊಟ್ಟಿದ್ದಾರೆ .ಛೇ!! ನೀನಾದರು ಆ Brazil aunti ಥರ ಒಂದಾದರು mobile phone ನುಂಗಬಾರದ???
PLEASE ಬೇಗ ಒಂದು phone ನುಂಗಮ್ಮ. 9 months ಒಬ್ಬನೇ ಒಳಗೆ ಇರಬೇಕು, ನಂಗೆ ತುಂಬಾ bore ಆಗುತ್ತೆ. Doctor uncle scan ಮಾಡಿ report ಕೊಡಕ್ ಮುಂಚೆ ನಾನೇ selfies Click ಮಾಡಿ whatsapp ಮಾಡ್ತೀನಿ, ವಾರ ವಾರ ನನ್ನ status update ಮಾಡ್ತೀನಿ, Daddy ನೂ tag ಮಾಡ್ತಿನಿ. Nurse aunti ಆಗಾಗ ನಿಂಗೆ check ಮಾಡ್ತೀನಿ ಅಂತ Poke ಮಾಡ್ತಾಳಲ್ಲ, ಅವಳಿಗೆ ನಾನು fbನಾಲ್ಲಿ poke ಮಾಡ್ತೀನಿ. Boreಆದಾಗ Honey singh uncle songs ನ download ಮಾಡಿ ಕೇಳ್ತಿನಿ, We are linked-in amma, we are umbilically connected.
ಅಮ್ಮ IIT ಗೆಲ್ಲಾ ಹೋಗ್ಬೇಕಾದ್ರೆ ತುಂಬ ಬೇಗ coaching ತೊಗೊಬೇಕಂತೆ, ಬೇಗ ಬೇಗ lessons update ಮಾಡು ಇಲ್ಲಿಂದ್ಲೇ ಓದಿ, homework ಮಾಡಿ ನಿನ್ನ timeline ನಲ್ಲಿ post ಮಾಡ್ತೀನಿ, comment ಮಾಡು.
ಅಮ್ಮ ಅಮ್ಮ Acidity ಆಗೋ ಅಂತದ್ದು ಏನೂ ತಿನ್ನಬೇಡಮ್ಮ, ನಿನ್ನ ಹೊಟ್ಟೆ ಒಳಗಿಂದ ಬರೋ soundu ನಾನು temple run ಆಡೋವಾಗ disturbಮಾಡತ್ತೆ.
Laaast request ಅಮ್ಮ…..ಎಲ್ಲಾದರೂ ಇರು ಎಂತಾದರು ಇರು ಒಟ್ಟಿನಲ್ಲಿ signal ಸಿಗೋಕಡೆ ಇರು.
Umbilically your’s,
Sweetu paapu
ಸುಭಾಷ್ ಚಂದ್ರ ಬೋಸ್
ಭಾರತ ದೇಶ ಕಂಡ ಅಪ್ರತಿಮ ದೇಶಭಕ್ತ, ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಈ ಮಹಾನ್ ರಾಷ್ಟ್ರ ನಾಯಕನ ಜೀವನದ ಘಟನೆಗಳ ಮೆಲುಕೇ ಸ್ಪೂರ್ತಿಯುತವಾದುದು. ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭರತಮಾತೆಯ ಈ ಧೀರ ಕುವರನ ಜನುಮ ದಿನ (ಜನವರಿ 23) ದಂದು ಸದಾ ಕ್ರಿಯಾಶಿಲರಾಗಿದ್ದ ದೇಶಕ್ಕಾಗಿ ತಮ್ಮ ಬದುಕನ್ನೇ ಮುಡುಪಿಟ್ಟ ಆ ಮಹಾನ್ ಚೇತನವನ್ನು ನಾವೆಲ್ಲಒಂದಾಗಿ ಸ್ಮರಿಸೋಣ.ನನ್ನೆಲ್ಲಾ ಆತ್ಮೀಯ ಸ್ನೇಹಿತರಿಗೆ ನನ್ನ ನಮಸ್ಕಾರಗಳು.ಇಂದು (ಜನವರಿ 23) ಭಾರತ ಕಂಡ ವೀರ ಸೇನಾನಿ, ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್ ರ ಹುಟ್ಟುಹಬ್ಬ.‘Give me blood and I will give you freedom’ ಎನ್ನುತ್ತಿದ್ದ ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭರತಮಾತೆಯ ಈ ಧೀರ ಕುವರನ ಜನುಮ ದಿನವಾದ ಇಂದುಅವರ ಜೀವನಗಾಥೆಯ ಮೇಲೊಂದು ಕ್ಷ-ಕಿರಣಾ ಬೀರುವ ಸಣ್ಣ ಪ್ರಯತ್ನವನ್ನಿಲ್ಲಿ ನಾನು ಮಾಡಿದ್ದೇನೆ.ಸ್ನೇಹಿತರಾದ ನಿಮಗೆಲ್ಲರಿಗೂ ಇದು ಇಷ್ಟವಾಗಬಹುದೆನ್ನುವುದು ನನ್ನ ಅನಿಸಿಕೆ….ಭಾರತೀಯರೆಲ್ಲರ ಪ್ರೀತಿಯ “ನೇತಾಜಿ”ಯಾಗಿದ್ದ ಸುಭಾಷ್ ಚಂದ್ರ ಬೋಸ್ ಹುಟ್ಟಿದ್ದು 1897ಜನವರಿ 23 ರಂದು ಒರಿಸ್ಸಾದ ಕಟಕ್ ನಲ್ಲಿ. ಜಾನಕಿನಾಥ ಬೋಸ್ ಮತ್ತು ಪ್ರಭಾವತಿ ದಂಪತಿಗಳ ಒಂಭತ್ತು ಜನ ಮಕ್ಕಳಲ್ಲಿ ಸುಭಾಷ್ ಆರನೆಯವರು. ಕಟಕ್ ನಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸವನ್ನುಪೂರೈಸಿದ ಬೋಸ್ ಸಣ್ಣ ವಯಸ್ಸಿನಲ್ಲಿಯೇ ಸ್ವಾಮಿ ವಿವೇಕಾನಂದ, ಮಹರ್ಷಿ ಅರವಿಂದರ ಸಾಹಿತ್ಯಗಳಿಂದಪ್ರಭಾವಿತರಾಗಿದ್ದರು. 1919 ರಲ್ಲಿ ತತ್ವಶಾಸ್ತ್ರ ವಿಷಯದಲ್ಲಿ ಬಿ.ಎ. ಪದವಿ ಪಡೆದ ಬೋಸ್ 1920 ರ ಸಪ್ಟೆಂಬರ್ ನಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಐ.ಸಿ.ಎಸ್. ಪರೀಕ್ಷೆಯಲ್ಲಿನಾಲ್ಕನೆ ಸ್ಥಾನದೊಂದಿಗೆ ಉತ್ತೀರ್ಣರಾದರು.ವಿದೇಶದಲ್ಲಿ ಕೆಲಸ ಮಾಡಲು ಒಪ್ಪದ ಬೋಸ್ ತಾವು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ 1921 ಜುಲೈ 16 ರಂದು ಭಾರತಕ್ಕೆ ವಾಪಾಸಾದರು. ಅದಾಗ ದೇಶದಲ್ಲಿ ಕಾವೇರಿದ್ದ ಸ್ವಾತಂತ್ರ್ಯ ಸಂಗ್ರಾಮದ ಮುಂದಾಳತ್ವವನ್ನು ವಹಿಸಿದ್ದ ಗಾಂಧೀಜಿಯವವರನ್ನು ಭೇಟಿಯಾದ ಬೋಸ್ ತಾವು ಸಹ ಸ್ವಾತಂತ್ರ್ಯ ಚಳುವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. 1921 ರ ಆಗಸ್ಟ್ ನಿಂದ ಚಿತ್ತರಂಜನ್ ದಾಸ್ ರವರ ಮಾರ್ಗದರ್ಶನದಲ್ಲಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸುವ ಸಲುವಾಗಿ ಯುವಕರನ್ನು ಸಂಘಟಿಸುವಲ್ಲಿ ನಿರತರಾದರು. ಬ್ರಿಟೀಷರನ್ನು ಕುರಿತಂತೆ ಕಾಂಗ್ರೆಸ್ ಪಕ್ಷವು ತಾಳಿದ್ದ ದ್ವಂದ್ವ ನೀತಿಗಳಿಂದ ಬೇಸತ್ತ ಬೋಸ್ತಾವು ಚಿತ್ತರಂಜನ್ ದಾಸ್ ರವರ ಜತೆಗೂಡಿ “ಸ್ವರಾಜ್ಯ ಪಕ್ಷ”ದ ಸ್ಥಾಪನೆ ಮಾಡಿದರು. 1923 ರ ಅಕ್ತೋಬರ್ ನಲ್ಲಿ ಚಿತ್ತರಂಜನ್ ದಾಸ್ ರವರು ಆರಂಭಿಸಿದ “ಫಾರ್ವರ್ಡ್” ದಿನಪತ್ರಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತ ಬೋಸ್ 1925 ಜೂನ್ 16 ರಂದು ಚಿತ್ತರಂಜನ್ ದಾಸ್ ನಿಧನದ ಬಳಿಕ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡರು.1927 ನವೆಂಬರ್ ನಲ್ಲಿ ಬಂಗಾಳದ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಜೆಗೊಂಡ ಬೋಸ್ ಅಲ್ಲಿಯೂ ಸಹ ಹತ್ತಾರು ವಿಧದ ಚಳುವಳಿಗಳ ನೇತೃತ್ವ ವಹಿಸಿದರು. ಅಲ್ಲದೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಆಯ್ಕೆಯಾದರು. ಆದರೆ ಗಾಂಧಿ ಮತ್ತು ಅವರ ಹಿಂಬಾಲಕರುಗಳಿಗೆ ಸುಭಾಷ್ ಚಂದ್ರ ಬೋಸ್ ಅನುಸರಿಸುತ್ತಿದ್ದ ಕ್ರಾಂತಿಕಾರಿ ಕಾರ್ಯನೀತಿಯು ಅಷ್ಟಾಗಿಸರಿಬರದ ಕಾರಣ ಬೋಸ್ ಪಕ್ಷದಿಂದ ಕ್ರಮೇಣ ದೂರಾಗಬೇಕಾಯಿತು.19833 ಫೆಬ್ರವರಿ 23 ಕ್ಕೆ ಯುರೋಪ್ ಪ್ರವಾಸ ಪ್ರಂರಂಭಿಸಿದ ಬೋಸ್ ಇಂಗ್ಲೆಂಡ್, ಆಸ್ಟ್ರಿಯಾ, ವಿಯೆನ್ನಾ, ಇಟಲಿ ದೇಶಗಳಿಗೆ ಭೇಟಿಯಿತ್ತರು. ಜೊಕೊಸ್ಲೋವಾಕಿಯಾ, ಪೋಲೆಂಡ್, ಜರ್ಮನಿಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದ ಕುರಿತಾಗಿ ಪ್ರಚಾರ ನಡೆಸಿದ ಬೋಸ್ ಇಟಲಿಯ ಸರ್ವಾಧಿಕಾರಿಯಾಗಿದ್ದ ಬೆನೆಟ್ಟೋ ಮುಸಲೋನಿಯ ಜತೆಯಲ್ಲಿ ಚರ್ಚೆ ನಡೆಸಿದ್ದರು. 1936 ಏಪ್ರಿಲ್ 8 ರಂದು ಭಾರತಕ್ಕೆ ಮರಳ್ ಬಂದ ಬೋಸ್ ರನ್ನು ಇಲ್ಲಿನ ಬ್ರಿಟೀಷ ಸರ್ಕಾರ ಬಂಧಿಸಿತು.ಇದಾದ ಸ್ವಲ್ಪ ದಿನಗಳ ಬಳಿಕ ಬಿಡುಗಡೆಗೊಂಡ ಬೋಸ್ 1937 ರಲ್ಲಿ ಮತ್ತೆ ಆಸ್ಟ್ರಿಯಾಕ್ಕೆ ಪ್ರಯಾಣ ಕೈಗೊಂಡರು.1938 ರ ಫೆಬ್ರವರಿಯಲ್ಲಿ ಹರಿಪುರದಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಶರಾಗಿ ಆಯ್ಕೆಗೊಂಡ ಬೋಸ್ ರಿಂದ ಅದೇ ಫೆಬ್ರವರಿ 18 ರಂದು ಐತಿಹಾಸಿಕ ಅಧ್ಯಕ್ಷ ಭಾಷಣವನ್ನು ಮಾಡಿದ್ದರು. ಹಲವಾರು ದೇಶಗಳನ್ನು ಸುತ್ತಿ ಪಡೆದ ರಾಜಕೀಯ ಅನುಭವ, ಒಳನೋತಗಳಿಂದ ಬ್ರಿಟೀಷರ ಒಡೆದು ಆಳುವ ನೀತಿಯ ಕುರಿತು ಕ್ಷಾತ್ರತೇಜದಿಂದ ಮಾಡಿದ ಅಂದಿನ ಭಾಷಣಾವು ಭಾರತದ ಇತಿಹಾಸದಲ್ಲೇ ಒಂದು ಅಸ್ಭುತವಾದ ಭಾಷಣವಾಗಿತ್ತು. ಬೋಸ್ ರವರು ನೀಡಿದ ದೇಶ ವಿಭಜನೆಯ ಬ್ರಿಟೀಷರ ತಂತ್ರದ ಸೂಚನೆಯು ಮುಂದಿನ ಒಂಭತ್ತು ವರ್ಷಗಳಲ್ಲಿಯೇ ನಿಜವಾಯಿತು! ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧ್ಯೇಯ ಮತ್ತು ಕಾರ್ಯನೀತಿಗಳಾನ್ನು ಕುರಿತು ಬಹಳವೇ ಮೆಚ್ಚುಗೆ ಹೊಂದಿದ್ದ ಬೋಸ್ ರವರಿಗೆ ಸಂಘವು ತನ್ನ ಸಂಘ “ಶಿಕ್ಷಾ ವರ್ಗ ಶಿಬಿರ’’ ಕ್ಕೆ ಬರಲು ಆಹ್ವಾನಿಸಿತ್ತು. ಬೋಸ್ ಆ ಆಹ್ವಾನವನ್ನು ಪುರಸ್ಕರಿಸಿದ್ದರಾದರೂ ಕಾರಣಾಂತರಗಳಿಂದ ಆ ಭೇಟಿ ಸಾಧ್ಯಾವಾಗಲಿಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಿರಿಗೆ ನಡೆದ ಪ್ರಥಮ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬೋಸ್ ತಮ್ಮಎದುರಾಳಿ ಪಟ್ತಾಭಿ ಸೀತಾರಾಮಯ್ಯನವರಿಗಿಂದ ೨೧೫ ಮತಗಳನ್ನು ಹೆಚ್ಚು ಒಅಡೆಯುವ ಮೂಲಕ ಭಾರೀ ವಿಜಯವನ್ನು ಗಳಿಸಿದ್ದರು. ಆದರೆ ತಮ್ಮ ವಿರುದ್ಧ ಹಲವಾರು ಟೀಕೆಗಳು, ಅನಗತ್ಯ ಋಣಾತ್ಮಕ ಮಾತುಗಳು ಗಾಂಧೀಜಿಯಿಂದ. ಸ್ವಾತಂತ್ರ್ಯದ ಮೋಡಗಳು ಸಮೀಪ ಇರುವಂತೆಯೇ ಬ್ರಿಟಿಷ್ ಸರ್ಕಾರದ ಜತೆದುರ್ಬಲ ಕಾಂಗ್ರೆಸ್‌ನ ತಾರ್ಕಿಕ ನಡೆಗಳಿಂದ ಬೇಸತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದರು. ಹೀಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ತಮ್ಮದೇ ಫಾರ್ವರ್ಡ್ ಬ್ಲಾಕ್ ಪಕ್ಷವನ್ನು ಸ್ಥಾಪಿಸಿದ ನೇತಾಜಿ ಸುಭಾಶ್ ಚಂದ್ರ ಬೋಸ್ ರವರ ಕ್ರಾಂತಿಕಾರಿ ಚಟುವಟಿಕೆಗಳು ಮುಂದುವರಿದವು. ಇದರಿಂದ ಕೆರಳಿದ ಬ್ರಿಟೀಷ್ ಸರ್ಕಾರ ಮತ್ತೆ ಸುಭಾಷ್ ಚಂದ್ರ ಬೋಸ್ ರನ್ನು ಬಂಧಿಸಿ ಕಾರಾಗ್ರಹಕ್ಕೆ ತಳ್ಳಿತು.ಆದರೆ 1941 ಜನವರಿ 26 ಕ್ಕೆ ಜೈಲಿನಿಂದ ತಪ್ಪಿಸಿಕೊಂಡು ಕಾಬೂಲ್ ಮಾರ್ಗವಾಗಿ ಬರ್ಲಿನ್ ಸೇರಿದ ಬೋಸ್ ಸೈನಿಕ ಕಾರ್ಯಾಚರಣೆಗೆ ತೊಡಗಿದರು. 1941 ನವೆಂಬರ್ 2 ಕ್ಕೆ ‘ಫ್ರೀ ಇಂಡಿಯಾ ಸೆಂಟರ್’ ನ್ನು ಉದ್ಘಾಟಿಸಿದ ಬೋಸ್ “ಆಜಾದ್ ಹಿಂದ್” ಲಾಂಛನವನ್ನು ಬಿಡುಗಡೆಗೊಳಿಸಿದರು. ಅಲ್ಲಿಂದ ಮುಂದೆ ಬರ್ಲಿನ್ ನಲ್ಲಿಯೇ ಇದ್ದು ತಮ್ಮ ಸೈನಿಕರಿಗೆ ಸೇನಾ ತರಬೇತಿಯನ್ನಿ ಕೊಡಲು ಪ್ರಾರಂಭಿಸಿದ ಬೋಸ್ ಬರ್ಲಿನ್ ರೇಡಿಯೋದಲ್ಲಿ ಆಗಾಗ ಭಾಷಣಾಗಳನ್ನು ಮಾಡುತ್ತಿದ್ದರು. ಅಲ್ಲಿಂದ ಮುಂದೆ ಜಪಾನ್ ಗೆ ತೆರಳಿದ ಬೋಸ್ ಅಲ್ಲಿ ಭರತ ದೇಶದ ಪೂರ್ವಗಡಿಗಳಲ್ಲಿ ಸೈನ್ಯವನ್ನು ಸಜ್ಜುಗೊಳಿಸಲು ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮುಖಾಂತರ ಭೂಗತ ಚಟುವಟಿಕೆಯಲ್ಲಿ ನಿರತರಾದರು. ಮುಂದೆ ಅಪ್ರತಿಮ ಬಲಿಷ್ತ ಸೈನ್ಯವಾಗಿ ಬೆಳೆದ ಆಜಾದ್ ಹಿಂದ್ ಫೌಜ್ ಗೆ ಭಾರತ ಮತ್ತು ಇತರೇ ಬ್ರಿಟೀಷ್ ವಸಾಹತು ದೇಶಗಳಲ್ಲಿನ ಸೈನ್ಯದಲ್ಲಿದ್ದ ನಿವೃತ್ತ ಯುದ್ದಕೈದಿಗಳು ಸಾಕಷ್ಟು ಸಂಖ್ಯೆಯಲ್ಲಿ ಸೇರಿಕೊಂಡರು.ಮುಂದೆ ಅತ್ಯಂದ ದಕ್ಷ ಸೈನ್ಯವಾಗಿ ರೂಪುಗೊಂಡ ಆಜಾದ್ ಹಿಂದ್ ಸೇನೆ ಇಂಡಿಯನ್ ನ್ಯಾಷನಲ್ ಆರ್ಮಿ(I.N.A.)ಯಾಗಿ ರೂಪುಗೊಂಡಿತು. ಮತ್ತೆ ಬೋಸ್ ಪೂರ್ವ ಏಷ್ಯಾ ರಾಷ್ಟ್ರಗಳನ್ನೆಲ್ಲಾ ಸುತ್ತಿ ಸ್ವರಾಜ್ಯ ಹೋರಾಟಕ್ಕೆ ಅಗಾಧವಾದ ಬೆಂಬಲವನ್ನು ಗಳಿಸಿಕೊಂಡರು. ತಮ್ಮ ಕೆಚ್ಚೆದೆಯ ಹೋರಾಟದಿಂದ ಬ್ರಿಟಿಷರ ಅಧೀನದಲ್ಲಿದ್ದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ವಶಪಡಿಸಿಕೊಂಡ ಬೋಸ್ ಅದಕ್ಕೆ “ಷಹೀದ್ ಸ್ವರಾಜ್” ಎಂದು ಕರೆದು “ಅರ್ಜೆ-ಹುಕುಮಂತ್-ಎ-ಆಜಾದ್ ಹಿಂದ್”(ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ)ನ್ನು ಸ್ಥಾಪಿಸಿದರು ಮತ್ತು I.N.A.ನ ಕಮಾಂಡರ್ ಇನ್ ಚೀಫ್ ಆಗಿ ನೇಮಕಗೊಂದರು.ಸುಭಾಶ್ ಸಾವಿನ ಸುತ್ತ…..ಇಂತಹಾ ಧೀಮಂತ ರಾಷ್ಟ್ರ ನಾಯಕರಾದ ನೇತಾಜಿಯವರು 1945 ಆಗಸ್ಟ್ 18 ರಂದು ದಕ್ಷಿಣ ವಿಯೆಟ್ನಾಂ ನ ಸೈಗಾನ್ ನಿಂದ ಟೋಕಿಯೋದತ್ತ ವಿಮಾನದಲ್ಲಿ ಪ್ರಯಾಣಿಸುತ್ತಿರಬೇಕಾದರೆ ಅವರಿದ್ದ ವಿಮಾನ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದರೆನ್ನಲಾಗುತ್ತದೆ. ಆದರೆ ಬೋಸ್ ರವರ ಸಾವಿನ ಕುರಿತಂತೆ ಇಂದಿಗೂ ಖಚಿತವಾದ ಆಧಾರಗಳು ಲಭ್ಯವಿಲ್ಲ. 1945 ಆಗಸ್ಟ್ 23 ನೇ ದಿನಾಂಕದಂದು ಜಪಾನ್ ನ ‘ರೇಡಿಯೋ ಟೋಕಿಯೋ’ ಪ್ರಥಮ ಬಾರಿಗೆ ಈ ಸುದ್ದಿಯನ್ನು ಪ್ರಸಾರ ಮಾಡಿದಾಗಿನಿಂದ ಇವತ್ತಿನ ವರೆವಿಗೂ ಸುಭಾಷ್ ಚಂದ್ರ ಬೋಸ್ ರ ಸಾವಿನ ವಿಚಾರವು ನಿಗೂಢವಾಗಿಯೇ ಉಳಿದಿದೆ.ಅಂದು ರೇಡಿಯೋದಲ್ಲಿನ ವಾರ್ತಾ ವಾಚಕರು ಹೇಳಿದ್ದೆಂದರೆ- “ವಿಮಾನ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡ ಮಿಸ್ಟರ್ ಸುಭಾಶ್ಚಂದ್ರ ಬೋಸ್ ಜಪಾನಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು. ಭಾರತದ ‘ಆಜಾದ್ ಹಿಂದ್’ ಪ್ರಾಂತೀಯ ಸರ್ಕಾರದ ಮುಖ್ಯಸ್ಥರಾಗಿದ್ದ ಮಿ. ಬೋಸ್ ಆಗಸ್ಟ್ ಹದಿನಾರನೇ ತಾರೀಕಿನಂದು ವಿಮಾನದ ಮೂಲಕ ಸಿಂಗಾಪುರದಿಂದ ಜಪಾನಿಗೆ ಪ್ರಯಾಣಿಸುತ್ತಿದ್ದರು. ಜಪಾನಿನ ರಾಜಧಾನಿ ಟೋಕಿಯೋದಲ್ಲಿ ಅಲ್ಲಿನ ಜಪಾನೀ ಸರಕಾರದ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲಿಕ್ಕಾಗಿ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಯಿತು. ಆಗಸ್ಟ್ ಹದಿನೆಂಟರ ಹದಿನಾಲ್ಕು ಗಂಟೆಗೆ (ಪೂರ್ವಾಹ್ನ ಎರಡು ಗಂಟೆಗೆ) ತೈಹೋಕು ವಿಮಾನ ನಿಲ್ದಾಣದ ಸಮೀಪ ಈ ಅಪಘಾತ ಸಂಭವಿಸಿತು. ತೀವ್ರವಾಗಿ ಗಾಯಗೊಂಡ ಬೋಸ್‌ರನ್ನು ಜಪಾನಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಆತ ಮಧ್ಯರಾತ್ರಿ ಸಾವನ್ನಪ್ಪಿದರು. ಬೋಸ್ ಅವರ ಜೊತೆಗೆ ಪ್ರಯಾಣಿಸುತ್ತಿದ್ದ ಲೆಫ್ಟಿನೆಂಟ್ ಜನರಲ್ತ್ಸುನಾಮಸಾ ಶಿಡೈ ಅವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಸುಭಾಶ್ಚಂದ್ರ ಬೋಸ್ ಅವರ ಸೇನೆಯ ಅಧಿಕಾರಿ ಹಾಗೂ ಆಪ್ತ ಹಬೀಬರ್ ರೆಹಮಾನ್ ಮತ್ತಿತರ ನಾಲ್ಕು ಮಂದಿ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ’’ಆದರೆ ಅಂದಿನ ಆ ಪಘಾತದ ಕುರಿತಂತೆ ಜಪಾನ್ ಸರ್ಕಾರವಾಗಲೀ, ಅಲ್ಲಿನ ಸೈನ್ಯದ ಮುಖ್ಯಸ್ಥರಾಗಲೀ ಯಾವುದೇ ಅಧಿಕೃತ ಘೋಷಣೆ ಮಾದಿಲ್ಲ. ಇದೇ ಕಾರಣಾದಿಂದಾಗಿ ಅಂದು ಏನು ನಡೆಯಿತು? ಅಂದು ನಿಜವಾಗಿಯೂ ನೇತಾಜಿಯವರಿದ್ದ ವಿಮಾನ ಅಪಘಾತಕ್ಕೀಡಾಗಿತ್ತೆ? ಎನ್ನುವ ಬಗ್ಗೆ ಇಂದಿಗೂ ಅನುಮಾನಗಳುಳಿದುಕೊಂಡಿವೆ.1947 ಆಗಸ್ಟ್ 15 ರಂದು ಭಾರತವು ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿತು.ಅಂದಿನಿಂದ ಇಂದಿನವರೆಗೆ ಕೇಂದ್ರದಲ್ಲಿ ಆಳ್ವೆಕೆ ನಡೆಸಿದ ಸರ್ಕಾರಗಳು ನೇತಾಜಿಯವರ ಸಾವಿನ ಕುರಿತಂತೆ ಸತ್ಯವನ್ನು ಬಹಿರಂಗಪಡಿಸುವ ಸಲುವಾಗಿ ಮೂರು ತನಿಖಾ ಸಮಿತಿಗಳಾನ್ನು ರಚಿಸಿದ್ದವು. ಅದರಲ್ಲಿ ಎರಡು ನೆಹರೂ ಮತ್ತು ಅವರ ಪುತ್ರಿ ಇಂದಿರಾಗಂಧಿಯವರ ಸರ್ಕಾರಗಳು ರಚಿಸಿದ್ದರೆ ಇನ್ನೊಂದು ವಾಜಪೇಯಿಯವರ ನೇತೃತ್ವದ ಎನ್.ಡಿ.ಎ. ಸರ್ಕಾರ ರಚನೆ ಮಾಡಿತ್ತು. ಇವುಗಳಲ್ಲಿ ಮೊದಲೆರಡು ಸಮಿತಿಗಳು ನೇತಾಜಿಯವರು “ವಿಮಾನಾಪಘಾತದಲ್ಲಿ ಮಡಿದರು” ಎನ್ನುವುದಾಗಿ ವರದಿ ಮಾಡಿದರೆ ೧೯೯೯ ರಲ್ಲಿ ರಚಿಸಲಾದ ಸುಪ್ರೀಂ ಕೋರ್ಟ್ ಮಿವೃತ್ತ ನ್ಯಾಯಮೂರ್ತಿ ಮನೋಜ್ ಮುಖರ್ಜಿಯವರ ಸಮಿತಿ ಮಾತ್ರ ವಿಭಿನ್ನ ವರದಿಯನ್ನು ನೀಡಿತ್ತು! ಸುಭಾಷ್ ಚಂದ್ರ ಬೋಸ್ ಈಗ ಬದುಕಿಲ್ಲ, ಆದರೆ 1945 ಆಗಸ್ಟ್ 18ರಂದು ತೈವಾನಿನ ತೈಹೋಕು ಬಳಿ ನಡೆದ ವಿಮಾನ ಅಪಘಾತದಲ್ಲಿ ಮಡಿದರು ಎನ್ನಲು ಅಂಥದ್ದೊಂದು ಅಪಘಾತವೇ ನಡೆದಿಲ್ಲ, ಆ ವಿಮಾನ ಮರುದಿನವೂ ಹಾರಾಟ ನಡೆಸಿತ್ತು ಅಷ್ಟೇ ಅಲ್ಲ, ಜಪಾನಿನ ರೆಂಕೋಜಿ ದೇವಾಲಯದಲ್ಲಿರುವ ಚಿತಾಭಸ್ಮ ಕೂಡ ನೇತಾಜಿವರದ್ದಲ್ಲ ಎಂಬ ಕಠೋರ ಸತ್ಯವನ್ನು ಬಹಿರಂಗ ಮಾಡಿತ್ತು!2006 ರಲ್ಲಿ ಮುಖರ್ಜಿ ಸಮಿತಿಯು ಈ ವರದಿಯನ್ನು ಸರ್ಕಾರಕ್ಕೆ ನೀಡಿದಾಗ ಕೇಂದ್ರದಲ್ಲಿನ ಕಾಂಗ್ರೆಸ್ ನೇತೃತ್ವದ ಯು.ಪಿ.ಎ. ಸರ್ಕಾರ ಮಾತ್ರ ಆ ವರದಿಯನ್ನೇ ತಿರಸ್ಕರಿಸಿತ್ತು!!ಬೋಸ್ ಬದುಕು-ಸಾವಿಗೆ ಸಂಬಂಧಿಸಿದ “33 ಗೌಪ್ಯ ದಾಖಲೆ”ಗಳನ್ನು ನೀಡುವಂತೆ ಬೋಸ್ ಕುಟುಂಬದ30 ಸದಸ್ಯರು ಮಾಹಿತಿ ಹಕ್ಕಿನ ಮೂಲಕ ಮನವಿ ಮಾಡಿದರೂ ಕೇಂದ್ರದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ!ಇದೆಲ್ಲದರಿಂದ ನಾವು ತಿಳಿಯಬಹುದಾದುದೇನು? ನಮ್ಮ ಘನ ಸರ್ಕಾರಕ್ಕೆ, ಅದರಲ್ಲಿಯೂ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಸುಭಾಷ್ ಚಂದ್ರ ಬೋಸ್ ರವರ ಸಾವಿನ ಕುರಿತಾದ ಸತ್ಯ ಬಹಿರಂಗವಾಗುವುದೇ ಬೇಕಿಲ್ಲ! ಹೀಗಾಗಿಯೇ ಅವರುಗಳು ಸತ್ಯ ಹೇಳಿದ್ದ ಮುಖರ್ಜಿ ಆಯೋಗದ ವರದಿಯನ್ನು ತಿರಸ್ಕರಿಸಿದ್ದು. ಮತ್ತು ಅದಕ್ಕೂ ಮೊದಲು ತಮ್ಮದೇ ಸರ್ಕಾರಗಳು ರಚಿಸಿದ್ದ ಸಮಿತಿಗಳು ನೀಡಿದ “ವಿಮಾನಾಪಘಾತದಲ್ಲಿ ನೇತಾಜಿಯವರು ಸಾವನ್ನಪ್ಪಿದರು” ಎನ್ನುವ ಹಳೆಯ ಸುಳ್ಳಿಗೇ ಜೋತು ಬಿದ್ದುದು.ಇದೇನೇ ಇರಲಿ, ಎಲ್ಲರಿಂದಲೂ ‘ನೇತಾಜಿ’ ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಸುಭಾಷ್ ಚಂದ್ರ ಬೋಸ್ ರವರ ವ್ಯಕ್ತಿತ್ವ ನಿಷ್ಕ್ರಿಯ ಹಾಗು ಪರಮ ಸ್ವಾರ್ಥಿಗಳಾದ ಗಾಂಧೀಜಿ-ನೆಹರುಗಳಿಗಿಂತ ಯಾವಾಗಲೂ ಎತ್ತರದ ಸ್ಥಾನದಲ್ಲಿ ನಿಲ್ಲುವಂತಹುದು. ಬೋಸ್ ನಾಡುಕಂಡ ಶ್ರೇಷ್ಠ ಸ್ವರಾಜ್ಯ ಹೋರಾಟಗಾರರಲ್ಲಿ ಒಬ್ಬರು. ಭಾರತದ ಸೈನ್ಯಬಲದ ಕುರಿತು, ಗಡಿ ರಕ್ಷಣೆ ಕುರಿತು ಅವರಿಗಿದ್ದ ದೃಷ್ಟಿಕೋನ ಇಂದಿನವರೆಗೂ ಯಾವುದೇ ರಕ್ಷಣಾ ಸಚಿವರಿಗೆ ಅರ್ಥವಾಗಿಲ್ಲ. ಬೋಸ್‌ರಂತಹಮಹಾನ್ ರಾಷ್ಟ್ರನಾಯಕನ ಜೀವನದ ಘಟನೆಗಳ ಮೆಲುಕೇ ಸ್ಫೂರ್ತಿಯುತ. ಕಲಿಯಬೇಕಾದ ಪಾಠಗಳೂ ಹತ್ತಾರು. ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದ್ದ ಬೋಸರು ರಾಷ್ಟಕ್ಕೇ ದಿಗ್ದರ್ಶನ ಮಾಡಿದವರು. ಇಂತಹಾ ಮಹಾತ್ಮ ನೇತಾಜಿ ಸುಭಾಷ್ ಚಂದ್ರ ಬೋಸ್ ರನ್ನು ಅವರ ಜನ್ಮದಿನವಾದ ಇಂದಾದರೂನೆನೆಯೋಣ. ನೆನೆದು ಧನ್ಯರಾಗೋಣ………
ಜೈ ಹಿಂದ್….!
READ MOREಕಳಪೆ ಗುಣಮಟ್ಟ: ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ
ಬೆಂಗಳೂರು: ಕಳಪೆ ಗುಣಮಟ್ಟ, ಸಾಧನೆ ಹಾಗೂ ಎಂಜಿನಿಯರಿಂಗ್ ಬಗ್ಗೆ ವಿದ್ಯಾರ್ಥಿಗಳ ನಿರಾಸಕ್ತಿಯಿಂದ ನೋಂದಣಿ ಕಡಿಮೆಯಾಗಿರುವ 800 ಎಂಜಿನಿಯಿರಂಗ್ ಕಾಲೇಜುಗಳಿಗೆ ಬೀಗ ಬೀಳಲಿದೆ. ಈ ಪೈಕಿ ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿವೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಅಧ್ಯಕ್ಷ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ.
ಎಐಸಿಟಿಇಯ ಕಠಿಣ ನಿಯಮಗಳಿಂದಾಗಿ ವಾರ್ಷಿಕ 150ಕ್ಕೂ ಹೆಚ್ಚು ಕಾಲೇಜುಗಳು ಮುಚ್ಚಲಾಗಿದೆ. ಮೂಲ ಸೌಕರ್ಯ ಇಲ್ಲದ, ಸತತ ಐದು ವರ್ಷಗಳ ಕಾಲ ಶೇಕಡ 30ಕ್ಕಿಂತ ಕಡಿಮೆ ನೋಂದಣಿ ದಾಖಲಾಗಿರುವ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಐಎಸಿಟಿಇ ವೆಬ್‌ಸೈಟ್‌ನಲ್ಲಿ 450ಕ್ಕೂ ಹೆಚ್ಚು ಕಾಲೇಜುಗಳ ಪಟ್ಟಿಯನ್ನು ನೀಡಲಾಗಿದೆ. ಈ ಪೈಕಿ ಕರ್ನಾಟಕದ 20ಕ್ಕೂ ಹೆಚ್ಚು ಕಾಲೇಜುಗಳಿವೆ.
ತೆಲಂಗಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ರಾಜಸ್ಥಾನ, ತಮಿಳುನಾಡು, ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶದ ಕಾಲೇಜುಗಳಿವೆ. ಬಹುತೇಕ ಖಾಸಗಿ ಕಾಲೇಜುಗಳೇ ಸ್ವಯಂ ಪ್ರೇರಿತವಾಗಿ ಮುಚ್ಚಲು ಅರ್ಜಿ ಸಲ್ಲಿಸಿವೆ ಎಂದು ಅನಿಲ್ ಮಾಹಿತಿ ನೀಡಿದ್ದಾರೆ.
ಎಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಕಾಪಾಡಿಕೊಳ್ಳಲು ವಿಫಲರಾದ ನಂತರ ಅವುಗಳನ್ನು ಪಾಲಿಟೆಕ್ನಿಕ್‌ಗಳಾಗಿ ಅಥವಾ ವಿಜ್ಞಾನ, ಕಲಾ ಕಾಲೇಜುಗಳಾಗಿ ಪರಿವರ್ತಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಬಹುತೇಕ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಉಪನ್ಯಾಸಕರು ಭವಿಷ್ಯದ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ವಿಫಲರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ಉಪನ್ಯಾಸಕರಾಗಿ ಸೇರ್ಪಡೆಯಾಗುವವರು ಕಡ್ಡಾಯವಾಗಿ 6 ತಿಂಗಳ ವಿಶೇಷ ತರಬೇತಿ ಪಡೆದಿರಬೇಕು. ಆಧುನಿಕ ಶಿಕ್ಷಣದ ತರಬೇತಿ ಹೊಂದಿರಬೇಕು ಎಂದು ಅನಿಲ್ ತಿಳಿಸಿದ್ದಾರೆ.
ಇದಲ್ಲದೇ ಕಾಲೇಜುಗಳಲ್ಲಿ ಕ್ಯಾಂಪಸ್ ಸಂದರ್ಶನ ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜಾಗುವಂತೆ ರೂಪಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿಯೂ ಕೆಲವು ಕಠಿಣ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎರಡನೇ ಅಥವಾ ಮೂರನೇ ವರ್ಷ ಓದುವ ವಿದ್ಯಾರ್ಥಿ ಕಡ್ಡಾಯವಾಗಿ ಇಂಟರ್ನ್‌ಷಿಪ್ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಆ ನಂತರ ಕ್ಯಾಂಪಸ್ ಸಂದರ್ಶನವನ್ನು ಸುಲಭವಾಗಿ ಎದುರಿಸಬಹುದು ಎಂದು ಅನಿಲ್ ಕಿವಿಮಾತು ಹೇಳಿದ್ದಾರೆ.
READ MOREಅತ್ಯಾಚಾರಿ ಬಾಬಾ ರಾಮ್ ರಾಹೀಮ್ ಸಿನಿಮಾ ಪರವಾನಗಿ ರದ್ದು!
ಮುಂಬೈ: ಅತ್ಯಾಚಾರಿ ಬಾಬಾ ರಾಮ್ ರಹೀಮ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಬಾಬಾ ರಾಮ್ ರಹೀಂ ಗೆ ಸಂಬಂಧಸಿದ ಸಿನಿಮಾ ಪರವಾನಗಿಯನ್ನು ಸಿನಿಮಾ, ಟಿವಿ ನಟ ಹಾಗೂ ನಿರ್ದೇಶಕರ ಸಂಘ ರದ್ದು ಮಾಡಿದೆ.
ಈ ಹಿಂದೆ ಎಂಎಸ್ ಜಿ, ಎಂಎಸ್ ಜಿ-2 ಚಿತ್ರಗಳು ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಬಾಬಾ ರಾಮ್ ರಹೀಂ ಅವರ ಪರವಾನಗಿಯನ್ನು ರದ್ದು ಮಾಡಿರುವುದಾಗಿ ಸಿನಿಮಾ, ಟಿವಿ ನಟ ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ತಮ್ಮ ಚಿತ್ರಗಳಿಗೆ ತಾವೇ ಸಾಹಿತ್ಯ, ಸಂಗೀತ, ನಿರ್ದೇಶನ ಸೇರಿದಂತೆ ಹಲವು ವಿಭಾಗಗಳಲ್ಲಿ ರಾಮ್ ರಹೀಂ ತೊಡಗಿಸಿಕೊಂಡಿದ್ದರು. ಎಂಎಸ್ ಜಿ-2 ಬಳಿಕ ರಾಮ್ ರಹೀಂ ಆನ್ ಲೈನ್ ಗುರುಕುಲ್ ಎಂಬ ಹೊಸ ಚಿತ್ರವೊಂದನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ಈ ಚಿತ್ರ ಹಾಲಿವುಡ್ ಬಾಲಿವುಡ್ ನಲ್ಲಿ ಈ ಹಿಂದೆಂದೂ ಕಂಡು ಕೇಳರಿಯದಂತೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದರು. ಈ ಚಿತ್ರದ ಒಂದು ಮೋಷನ್ ಚಿತ್ರವನ್ನೂ ಕೂಡ ರಾಮ್ ರಹೀಂ ಬಿಡುಗಡೆ ಮಾಡಿದ್ದರು.
ಆದರೆ ಸಿಐಎಟಿಎಎ ಇದೀಗ ಅವರ ಪರವಾನಗಿಯನ್ನೇ ರದ್ದುಗೊಳಿಸಿದ್ದು, 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿರುವ ರಾಮ್ ರಹೀಂ ಇನ್ನು ಮುಂದೆ ಚಿತ್ರಗಳನ್ನು ಮಾಡುವಂತಿಲ್ಲ.
READ MOREಬಾಕ್ಸರ್ ಗೆಟಪ್ ನಲ್ಲಿ ಸುದೀಪ್: ವೈರಲ್ ಆಯ್ತು ಪೈಲ್ವಾನ್ ಸಿನಿಮಾ ಪೋಸ್ಚರ್
ಬೆಂಗಳೂರು: ವಿಲ್ಲನ್ ನಂತರ ಕಿಚ್ಚ ಸುದೀಪ್ ಪೈಲ್ವಾನ್ ಸಿನಿಮಾದಲ್ಲಿ ಬಾಕ್ಸರ್ ಗೆಟಪ್ ನಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ರಿಲೀಸ್ ಆಗಿದ್ದು ವೈರಲ್ ಆಗಿದೆ. ಎಸ್ ಕೃಷ್ಣ ನಿರ್ದೇಶನದ ಪೈಲ್ವಾನ್ ಬಾಕ್ಸಿಂಗ್ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದೆ.
ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೃಷ್ಣ ಪೈಲ್ವಾನ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಸುದೀಪ್ ಗೆ ವಿದೇಶಿ ಫೈಟ್ ಮಾಸ್ಚರ್ ತರಬೇತಿ ನೀಡುತ್ತಿದ್ದಾರೆ
“ಪೈಲ್ವಾನ್’ ಚಿತ್ರವನ್ನು ಚಿತ್ರವನ್ನು ಆರ್.ಆರ್.ಆರ್. ಮೋಷನ್ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ನಿರ್ಮಿಸುತ್ತಿದ್ದಾರೆ. ಇನ್ನು ನಿರ್ದೇಶನ ಮಾಡುವ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ರಚಿಸಿದ್ದಾರೆ. ಇದೊಂದು , ಅಕ್ಟೋಬರ್ ಕೊನೆಯಲ್ಲಿ ಚಿತ್ರ ಆರಂಭವಾಗಲಿದೆ.
ಈ ಚಿತ್ರಕ್ಕಾಗಿ ದಾವಣಗೆರೆ, ಹುಬ್ಬಳ್ಳಿ ಸುತ್ತಮುತ್ತ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯಲಿದೆಯಂತೆ. ಈಗಾಗಲೇ ಬ್ಯಾಂಕಾಕ್‌ನಲ್ಲಿ ಚಿತ್ರದ ಫೋಟೋ ಶೂಟ್ ಆಗಿದ್ದು, ಆ ಫೋಟೋ ಶೂಟ್‌ನಲ್ಲಿ ಕ್ಲಿಕ್ಕಿಸಲಾದ ಕೆಲವು ಫೋಟೋಗಳನ್ನು ಇದೀಗ ಬಿಡುಗಡೆ ಮಾಡಲಾಗಿದೆ.
ಇನ್ನು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್ ಅವರು ಛಾಯಾಗ್ರಹಣ ಮಾಡಲಿದ್ದಾರೆ.
READ MORE